

ನವದಹೆಲಿ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ಭಾನುವಾರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲೇ ಅಯೊಧ್ಯಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಉನ್ನಾವೊ ಸಂಸದ, ಬಿಜೆಪಿಯ ಉದ್ದೇಶ ಸ್ಪಷ್ಟವಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲೇ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.
'ಇಂದಲ್ಲ ನಾಳೆ ಮಂದಿರ ನಿರ್ಮಾಣವಾಗೇ ಆಗುತ್ತೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಈಗ ಒಂದು ವರ್ಷ ಆಗಿದೆ ಅಷ್ಟೇ. ನಮಗೆ ಇನ್ನೂ ನಾಲ್ಕು ವರ್ಷ ಕಾಲಾವಕಾಶ ಇದೆ' ಬಿಜೆಪಿ ಸಂಸದ ಹೇಳಿದ್ದಾರೆ.
ರಾಮಮಂದಿರ ನಿರ್ಮಾಣ ಮಾಡುವುದು ಬಿಜೆಪಿಗೆ ಸಮಸ್ಯೆ ಅಲ್ಲವೇ ಅಲ್ಲ. ಆದರೆ ಸಂತರಾದ ನಮಗೆ ಇದು ದೊಡ್ಡ ಸಮಸ್ಯೆ ಎದು ಇತ್ತೀಚಿಗೆ ಸಾಕ್ಷಿ ಮಹಾರಾಜ್ ಹೇಳಿದ್ದರು.