ವೋಟಿಗಾಗಿ ನೋಟು: ತೆಲಂಗಾಣ ಸಿಎಂ ಕೆಸಿಆರ್ ವಿರುದ್ಧ ಎಫ್ಐಆರ್

ವೋಟಿಗಾಗಿ ಲಂಚ ಪ್ರಕರಣ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದೆ. ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರು ಟಿಡಿಪಿ ಶಾಸಕರ ಫೋನ್ ಕದ್ದಾಲಿಕೆ...
ಕೆ ಚಂದ್ರಶೇಖರ್ ರಾವ್
ಕೆ ಚಂದ್ರಶೇಖರ್ ರಾವ್

ಹೈದರಾಬಾದ್: ವೋಟಿಗಾಗಿ ಲಂಚ ಪ್ರಕರಣ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದೆ. ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರು ಟಿಡಿಪಿ ಶಾಸಕರ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆಂದು ಎಂದು ಆರೋಪಿಸಿ ರಾವ್ ವಿರುದ್ಧ ಆಂಧ್ರ ನೀರಾವರಿ ಸಚಿವ ದೇವಿನೇನಿ ಉಮಾಮಹೇಶ್ವರ್ ರಾವ್ ದೂರು ನೀಡಿದ್ದಾರೆ.

ಉಮಾಮಹೇಶ್ವರ್ ರಾವ್ ಅವರ ದೂರಿನನ್ವಯ ವಿಶಾಖಪಟ್ನಂ ಪೊಲೀಸರು ಚಂದ್ರಶೇಖರ್ ರಾವ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಚಂದ್ರಬಾಬು ನಾಯ್ಡು ಅವರನ್ನು ವಿಚಾರಣೆ ನಡೆಸುವ ಸಲುವಾಗಿ ಸಮನ್ಸ್ ನೀಡುವ ಸಾಧ್ಯತೆ ಇದೆ. ಈ ಮಧ್ಯೆ ತೆಲಂಗಾಣ ಸರ್ಕಾರ ಟಿಡಿಪಿ ನಾಯಕರ ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರದ ಗಮನಕ್ಕೆ ತರಲು ಶಾಸಕರು ಮುಂದಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com