ಜೂ. 21ರ ಯೋಗ ದಿನದಂದು ಪ್ರಧಾನಿ ಮೋದಿ ಯೋಗ ಪ್ರದರ್ಶನ ಮಾಡುವುದಿಲ್ಲ: ಸುಷ್ಮಾ
ನವದೆಹಲಿ: ಜೂನ್ 21 ರಂದು ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸ್ವತಃ ಪ್ರಧಾನಿ ನರಂದ್ರ ಮೋದಿ ಅವರು ಯೋಗ ಪ್ರದರ್ಶನ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಮೋದಿ ಅವರು ಯೋಗ ಪ್ರದರ್ಶನ ಮಾಡುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
ರಾಜಪಥದಲ್ಲಿ ನಡೆಯಲಿರುವ ಕಾರ್ಯಕ್ರಮದ ಕುರಿತಾಗಿ ಮಾಹಿತಿ ನೀಡಿದ ಸುಷ್ಮಾಸ್ವರಾಜ್ ಅವರು, ಜೂನ್ 21 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಅವರು ಕಾರ್ಯಕ್ರಮದ ಉದ್ಘಾಟನೆ ಹಾಗೂ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಪ್ರಥಮ ಬಾರಿಗೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಜೂನ್.21 ರನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿ ಘೋಷಿಸಿತ್ತು. ಕಳೆದ ವರ್ಷ ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಸಮ್ಮತಿ ಸೂಚಿಸಿತ್ತು. ಇದಕ್ಕೆ ವಿಶ್ವಾದ್ಯಂತ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಸುಮಾರು 170 ಕ್ಕೂ ಹೆಚ್ಚು ರಾಷ್ಟ್ರಗಳು ಯೋಗ ದಿನಾಚರಣೆ ಆಚರಿಸಲಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ