ಪಾಕಿಸ್ತಾನ 'ಉಪದ್ರವಿ' ರಾಷ್ಟ್ರ ಮೋದಿ ಹೇಳಿಕೆ ಪಾಕ್ ಅಸಮಾಧಾನ

ಬಾಂಗ್ಲಾದೇಶ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನವನ್ನು "ಉಪದ್ರವಿ" ರಾಷ್ಟ್ರ ಎಂದು ನಿಂದಿಸಿರುವುದಕ್ಕೆ ಪಾಕ್ ಅಸಮಾಧಾನ ವ್ಯಕ್ತಪಡಿಸಿದೆ...
ನರೇಂದ್ರ ಮೋದಿ
ನರೇಂದ್ರ ಮೋದಿ

ಇಸ್ಲಾಮಾಬಾದ್: ಬಾಂಗ್ಲಾದೇಶ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನವನ್ನು "ಉಪದ್ರವಿ" ರಾಷ್ಟ್ರ ಎಂದು ನಿಂದಿಸಿರುವುದಕ್ಕೆ ಪಾಕ್ ಅಸಮಾಧಾನ ವ್ಯಕ್ತಪಡಿಸಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧದ ಅಂಶವನ್ನು ಪ್ರಧಾನಿ ಮೋದಿ ಅವರು "ಉಪದ್ರವ" ಎಂದು ಬಣ್ಣಿಸಿರುವುದು ನಿಜಕ್ಕೂ ದುರದೃಷ್ಟಕರ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಖಾಜಿ ಖಲೀಲುಲ್ಲಾ ಹೇಳಿದ್ದಾರೆ.

ನೆರೆ ರಾಷ್ಟ್ರ ಭಾರತದೊಂದಿಗೆ ಒಳ್ಳೆಯ ಸಂಬಂಧ ಹೊಂದಿರಲು ಹಾಗೂ ಈ ಪ್ರದೇಶದಲ್ಲಿ ಶಾಂತಿಯಿಂದ ಸಹಬಾಳ್ವೆ ನಡೆಸಲು ಪಾಕಿಸ್ತಾನ ಬಯಸುತ್ತದೆ ಎಂದು ಖಾಜಿ ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನವು ನಿರಂತರವಾಗಿ ಭಾರತಕ್ಕೆ ತೊಂದರೆ ಕೊಡುತ್ತಲೇ ಇರುತ್ತದೆ. ಭಯೋತ್ಪಾದನೆಗೆ ಬೆಂಬಲ ಕೊಡುತ್ತಾ ಉಪದ್ರವ ನೀಡುತ್ತಿದೆ. ಹೀಗಾಗಿ ಇಂಥ ಉಗ್ರ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ" ಎಂದು ಢಾಕಾ ವಿಶ್ವವಿದ್ಯಾಲಯದಲ್ಲಿ ಮೋದಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com