
ನವದೆಹಲಿ: ದೆಹಲಿ ಕಾನೂನು ಸಚಿವ ಜಿತೆಂದ್ರ ಸಿಂಗ್ ತೋಮರ್ ಅವರ ದಿಡೀರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಯೋಗೇಂದ್ರ ಯಾದವ್ ಅವರು, ತೋಮರ್ ಅವರು ಕಾನೂನು ಪದವಿ ಪಡೆದಿರುವುದೇ ನಿಜವಾಗಿದ್ದರೆ ಆಮ್ ಆದ್ಮಿ ಪಕ್ಷ ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.
ನಕಲಿ ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಪೊಲೀಸರು ಆಪ್ ಸಚಿವರನ್ನು ಬಂಧಿಸಿರುವ ಬಗ್ಗೆ ಯಾದವ್ ಅವರು ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾಗಲ್‌ಪುರ ವಿಶ್ವವಿದ್ಯಾಲಯದಿಂದ ತೋಮರ್ ಅವರು ನಕಲಿ ಪದವಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಈ ಹಿಂದೆ ಬಿಜೆಪಿ ಆರೋಪಿಸಿತ್ತು. ಆದರೆ ಈ ಆರೋಪವನ್ನು ತಳ್ಳಿಹಾಕಿದ್ದ ತೋಮರ್, ಇದು ರಾಜಕೀಯ ಪಿತೂರಿ ಎಂದಿದ್ದರು.
ತೋಮರ್ ಸಿಂಗ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಹ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ದೆಹಲಿ ಪೊಲೀಸರು ಯಾವುದೇ ನೋಟಿಸ್ ನೀಡದೇ ಆಪ್ ಸಚಿವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.
Advertisement