ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿ ರಹಿತ ಸಾಲ ನೀಡಲು ಕೇಂದ್ರದ ಚಿಂತನೆ

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ರೈತರಿಗೆ ಬರಬೇಕಿರುವ ಬಾಕಿ ಹಣ ಪಾವತಿಗಾಗಿ ಮುಂದಾಗಿರುವ ಕೇಂದ್ರ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿ ರಹಿತ ಸಾಲ ನೀಡುವ ಕುರಿತು ಚಿಂತನೆ ನಡೆಸಿದೆ.
ಸಕ್ಕರೆ ಕಾರ್ಖಾನೆ
ಸಕ್ಕರೆ ಕಾರ್ಖಾನೆ

ನವದೆಹಲಿ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ರೈತರಿಗೆ ಬರಬೇಕಿರುವ ಬಾಕಿ ಹಣ ಪಾವತಿಗಾಗಿ ಮುಂದಾಗಿರುವ ಕೇಂದ್ರ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿ ರಹಿತ ಸಾಲ ನೀಡುವ ಕುರಿತು ಚಿಂತನೆ ನಡೆಸಿದೆ.

ಕಬ್ಬು ಬೆಳಗಾರರ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಬಡ್ಡಿರಹಿತ ಸಾಲ ನೀಡುವ ಕುರಿತು ಚಿಂತನೆ ನಡೆಸುತ್ತಿದ್ದು, ರೈತರಿಗೆ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ಕೇಂದ್ರ ಸರ್ಕಾರದಿಂದ ಸಾಲ ಪಡೆದು ರೈತರಿಗೆ ಮರುಪಾವತಿ ಮಾಡಬಹುದಾಗಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್
ಪಾಸ್ವಾನ್ ಬುಧವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಸಂಪುಟ ಕಾರ್ಯದರ್ಶಿ ಅಜಿತ್ ಸೇಠ್ ಮತ್ತು ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಪಾಲ್ಗೊಂಡಿದ್ದರು. ಸಭೆಯಲ್ಲಿ ನಾಲ್ಕು ಪ್ರಮುಖ ಅಂಶಗಳ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಈ ಪೈಕಿ ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ "ಬಡ್ಡಿ ರಹಿತ ಸಾಲ"ವನ್ನು ವಿಸ್ತರಿಸುವುದು, ಸಕ್ಕರೆ ಕಾರ್ಖಾನೆಗಳು ಬ್ಯಾಂಕಿನಿಂದ ಪಡೆಯುವ ಬಡ್ಡಿ ರಹಿತ ಸಾಲದ ಪ್ರಮಾಣವನ್ನು ಸುಮಾರು 4, 400 ಕೋಟಿಗಳ ವರೆಗೆ ವಿಸ್ತರಿಸುವುದು ಮತ್ತು ರೈತರಿಗೆ ಸೂಕ್ತ ರೀತಿಯಲ್ಲಿ ಬಾಕಿ ಹಣ ಪಾವತಿಸುವುದು ಸೇರಿದಂತೆ 4 ಪ್ರಮುಖ ಅಂಶಗಳ ಕುರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಾಸ್ವಾನ್ ಹೇಳಿದರು.

ಸಕ್ಕರೆ ಕಾರ್ಖಾನೆಗಳು ಹಣ ಪಾವತಿ ಮಾಡದೇ ಇರುವುದರಿಂದ, ಕಬ್ಬು ಅರೆದ ರೈತರು ಸಾಲದ ಬಾಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಪ್ರಕರಣ ಹೆಚ್ಚುತ್ತಿತ್ತು. ಇದನ್ನು ತಡೆಗಟ್ಟಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಅಲ್ಲದೇ ಕೂಡಲೇ ರೈತರಿಗೆ ಹಣ ಪಾವತಿಸುವಂತೆ ಕಾರ್ಖಾನೆಗಳಿಗೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com