ಸರ್ಕಾರದ ವೈಫಲ್ಯ ಮುಚ್ಚಲು ಯೋಗ ಪ್ರದರ್ಶನದ ನಾಟಕ: ದಿಗ್ವಿಜಯ್ ಸಿಂಗ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಮೂಹಿಕ ಯೋಗ ಕಾರ್ಯಕ್ರಮ ಹಮ್ಮಿಕೊಂಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಮೂಹಿಕ ಯೋಗ ಕಾರ್ಯಕ್ರಮ ಹಮ್ಮಿಕೊಂಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಸಾಮೂಹಿಕ ಯೋಗದಂತಹ  ಕಾರ್ಯಕ್ರಮ ಹಮ್ಮಿಕೊಳ್ಳುವ ನಾಟಕವಾಡುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ. ಭಾರತ ಸರ್ಕಾರ ಹಮ್ಮಿಕೊಂಡಿರುವ ಸಾಮೂಹಿಕ ಯೋಗದ ತರ್ಕ(ಲಾಜಿಕ್) ತಮಗೆ ಅರ್ಥವಾಗುತ್ತಿಲ್ಲ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

ಭಾರತ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರೂ, ದಿಗ್ವಿಜಯ್ ಸಿಂಗ್ ಯೋಗಕ್ಕೆ  ಬೆಂಬಲ ನೀಡಿದ್ದಾರೆ. ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡುವುದನ್ನು ನಾನೂ ಒಪ್ಪುತ್ತೇನೆ ಆದರೆ ಯೋಗವನ್ನೇಕೆ  ರಾಜಕೀಯ-ಧಾರ್ಮಿಕ ವಿಷಯವನ್ನಾಗಿ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದಿದ್ದಾರೆ.

ಕಳೆದ  40  ವರ್ಷಗಳಿಂದ ತಾವೂ ಸಹ ಯೋಗ, ಧ್ಯಾನ, ಪ್ರಾಣಾಯಾಮ ಮಾಡುತ್ತಿರುವುದಾಗಿ ತಿಳಿಸಿರುವ ದಿಗ್ವಿಜಯ್ ಸಿಂಗ್, ಸಾಮೂಹಿಕವಾಗಿ ಯೋಗವನ್ನು ಆಚರಿಸಲು ವಿರೋಧ ವ್ಯಕ್ತಪಡಿಸಿದ್ದಾರೆ. ಜೂ.21 ರಂದು ನಡೆಯಲಿರುವ ಪ್ರಥಮ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ನವದೆಹಲಿಯ ರಾಜಪಥದಲ್ಲಿ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.    

ಸಾಮೂಹಿಕವಾಗಿ ಯೋಗ ಆಚರಿಸುವುದಕ್ಕೆ ಹಾಗೂ ಸೂರ್ಯನಮಸ್ಕಾರಕ್ಕೆ ಅಲ್ಪಸಂಖ್ಯಾತ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಶಾಲೆಗಳಲ್ಲಿ ಯೋಗ ತರಗತಿಗಳನ್ನು ಕಡ್ಡಾಯ ಮಾಡುವುದಕ್ಕೂ ಸಹ ಅಖಿಲ ಭಾರತೀಯ ಮುಸ್ಲಿಂ ವಯಕ್ತಿಕ ಕಾನೂನು ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com