ದೇಶ

ನಿಲ್ಲದ ಮ್ಯಾಗಿ ರಗಳೆ

ಮ್ಯಾಗಿ ಮಾರಾಟ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನೀಡಿದ್ದ ಆದೇಶ ಪ್ರಶ್ನಿಸಿ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದ ನೆಸ್ಲೆ ಕಂಪೆನಿಗೆ ಅಲ್ಲಿಯೂ ಜಯ ಸಿಕ್ಕಿಲ್ಲ...

ನಿಲ್ಲದ ಮ್ಯಾಗಿ ರಗಳೆ
ಸಂಗ್ರಹ ಚಿತ್ರ
Published On :

ಮುಂಬೈ: ಮ್ಯಾಗಿ ನೂಡಲ್ಸ್ ವಿವಾದ ಸದ್ಯಕ್ಕೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಮ್ಯಾಗಿ ಮಾರಾಟ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನೀಡಿದ್ದ ಆದೇಶ ಪ್ರಶ್ನಿಸಿ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದ ನೆಸ್ಲೆ ಕಂಪೆನಿಗೆ ಅಲ್ಲಿಯೂ ಜಯ ಸಿಕ್ಕಿಲ್ಲ.

ಮುಂದಿನ ಆದೇಶ ಬರುವವರೆಗೆ 2 ಮಿನಿಟ್ ಮ್ಯಾಗಿ ನೂಡಲ್ಸ್ ಮಾರಾಟವನ್ನು ಹಿಂಪಡೆಯಬೇಕೆಂದು ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಈ ತಿಂಗಳ 30ಕ್ಕೆ ಮುಂದೂಡಿದೆ.

 ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ಎಲ್ಲಾ 9 ಬಗೆಯ ಮ್ಯಾಗಿ ನೂಡಲ್ಸ್ ಮಾರಾಟವನ್ನು ನಿಲ್ಲಿಸಬೇಕೆಂದು ಆಹಾರ ಸುರಕ್ಷತಾ ಪ್ರಾಧಿಕಾರ ನೀಡಿದ್ದ ಆದೇಶವನ್ನು ನ್ಯಾಯಾಲಯ ಪರಿಶೀಲಿಸುವಂತೆ ನೆಸ್ಲೆ ಕಂಪೆನಿ ಮುಂಬೈ ಹೈಕೋರ್ಟ್ಗೆಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ವಿ.ಎಂ.ಖಾನಡೆ ಮತ್ತು ಬಿ.ಪಿ ಕೊಲಬವಾಲಾ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಯನ್ನು  ಈ ತಿಂಗಳ 30ಕ್ಕೆ ಮುಂದೂಡಿ ಅಲ್ಲಿಯವರೆಗೆ ಮ್ಯಾಗಿ ನೂಡಲ್ಸ್ ಮಾರಾಟವನ್ನು ನಿಷೇಧಿಸಿದೆ.

ಸ್ವಾಭಾವಿಕ ನ್ಯಾಯದ ತತ್ವವನ್ನು ಪ್ರಾಧಿಕಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉಲ್ಲಂಘಿಸಿ ಮ್ಯಾಗಿ ಮಾರಾಟಕ್ಕೆ ನಿಷೇಧ ಹೇರಿವೆ ಎಂದು ನೆಸ್ಲೆ ಕಂಪೆನಿ ತನ್ನ ಅರ್ಜಿಯಲ್ಲಿ ದೂರಿತ್ತು. ನೆಸ್ಲೆ ಕಂಪೆನಿಯ ಈ ಆರೋಪಕ್ಕೆ ಉತ್ತರಿಸುವಂತೆ ನ್ಯಾಯಾಲಯ  ಕೇಂದ್ರ, ರಾಜ್ಯ ಹಾಗೂ ಆಹಾರ ಸುರಕ್ಷತಾ ಪ್ರಾಧಿಕಾರಕ್ಕೆ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.