ದೇಶ
ಉ.ಪ್ರದೇಶದಲ್ಲಿ ಭೀಕರ ಅಪಘಾತ: 15 ಸಾವು, 30 ಮಂದಿಗೆ ಗಾಯ
ಉತ್ತರ ಪ್ರದೇಶದ ಮಲವಾನ್ ಬಳಿ ಲಾರಿಯೊಂದು ಎರಡು ಟ್ರ್ಯಾಕ್ಟರ್‌ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ...
ಎಥಾ: ಉತ್ತರ ಪ್ರದೇಶದ ಮಲವಾನ್ ಬಳಿ ಲಾರಿಯೊಂದು ಎರಡು ಟ್ರ್ಯಾಕ್ಟರ್‌ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಪುರ ಗ್ರಾಮದಲ್ಲಿ ಆಯೋಜಿಸಿದ್ದ ಭಗವತ್ ಪುಜಾಗೆ ಸಂಬಂಧಿಸಿದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗಳಿಗೆ ಲಾರಿ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಪಿ.ಗುಪ್ತಾ ಅವರು ಹೇಳಿದ್ದಾರೆ.
ಮೈನ್‌ಪುರಿ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಸುಮಾರು 30 ಗಾಯಗೊಂಡಿದ್ದು, ಅವರನ್ನು ಏಥಾ, ಅಲಿಘಢ ಮತ್ತು ಆಗ್ರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಗುಪ್ತಾ ತಿಳಿಸಿದ್ದಾರೆ.


