

ಹೈದಾರಾಬಾದ್: ಹೈದರಾಬಾದ್ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಘಟಕವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಘಟಕದ ಸಿಬ್ಬಂದಿಯೊಬ್ಬ ಸ್ಥಳದಲ್ಲಿದ್ದ ತ್ಯಾಜ್ಯಗಳನ್ನು ತೆಗೆದು ಸುಟ್ಟುಹಾಕಲು ಯತ್ನಿಸಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಘಟನೆ ವೇಳೆ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 5 ಮಂದಿ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಆಕಸ್ಮಿಕ ಸ್ಪೋಟದಿಂದ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...