

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವ ಅನಂತ್‍ಕುಮಾರ್ ರನ್ನು ಪಕ್ಷದ ಚುನಾವಣಾ ಉಸ್ತುವಾರಿಯನ್ನಾಗಿ ಬಿಜೆಪಿ ನೇಮಕ ಮಾಡಿದೆ.
ಅನಂತ್ ಅವರಿಗೆ ಬಿಹಾರದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಮತ್ತೊಬ್ಬ ಸಚಿವ ಧರ್ಮೇಂದ್ರ ಪ್ರಧಾನ್ ಸಾಥ್ ನೀಡಲಿದ್ದಾರೆ. ಪ್ರಧಾನ್ ಬಿಹಾರ ಚುನಾವಣೆಯ ಸಹ-ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.
ಅನಂತ್‍ಗೆ ಪಕ್ಷದ ಅನೇಕ ಸಂಘಟನಾತ್ಮಕ ಹುದ್ದೆಗಳನ್ನು ನಿರ್ವಹಿಸಿದ, ಅಭಿಯಾನಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಅನುಭವವಿದೆ.