
ಉತ್ತರ ಪ್ರದೇಶ: ಶಹಜಾನಪುರ ಪತ್ರಕರ್ತರೊಬ್ಬರ ಕೊಲೆ ಆರೋಪ ಎದುರಿಸುತ್ತಿರುವ ಸಮಾಜವಾದಿ ವಾದಿ ಪಕ್ಷದ ಸಚಿವ ರಾಮ ಮೂರ್ತಿ ವರ್ಮಾ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ತಮ್ಮ ಪಕ್ಷ ತಪ್ಪು ಮಾಡುವುದನ್ನು ವಿರೋಧಿಸುತ್ತದೆ. ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.
ಸಚಿವ ರಾಮ್ ಮೂರ್ತಿ ವರ್ಮಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ, ಮೃತ ಪತ್ರಕರ್ತ ಕುಟುಂಬಸ್ಥರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಜೊತೆಗೆ ಸಮಾಜವಾದಿ ಪಕ್ಷದ ಹಲವು ಮುಖಂಡರು ಕೇಸ್ ವಾಪಸ್ ತೆಗೆದುಕೊಳ್ಳುವಂತೆ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮೃತ ಪತ್ರಕರ್ತರ ಕುಂಟುಂಬಸ್ಥರು ಆರೋಪಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ ಮಾಡಿರುವ ಕುಟುಂಬಸ್ಥರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
Advertisement