ಸುಷ್ಮಾ ವಿವಾದ: ಸುಪ್ರೀಂ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ 'ಕೈ' ಆಗ್ರಹ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ...
ಆನಂದ್ ಶರ್ಮಾ
ಆನಂದ್ ಶರ್ಮಾ

ಮುಂಬೈ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಪ್ರಕರಣ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ದಿಂದ ತನಿಖೆಯಾಗಲಿ ಎಂದು ಮಂಗಳವಾರ ಕಾಂಗ್ರೆಸ್ ಒತ್ತಾಯಿಸಿದೆ.

ಈ ಸಂಬಂಧ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು, ದೇಶಭ್ರಷ್ಟ ಲಲಿತ್ ಮೋದಿಗೆ ಎನ್‌ಡಿಎ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಓರ್ವ ದೇಶಭ್ರಷ್ಟನಿಗೆ ಸಹಾಯ ಮಾಡುತ್ತಿದೆ. ಲಲಿತ್ ಮೋದಿ ಒಬ್ಬ ಕ್ರಿಮಿನಲ್. ಆತನ ವಿರುದ್ಧ ಮನಿ ಲಾಂಡ್ರಿಂಗ್ ಆರೋಪವಿದೆ. ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಮಾಡಿದ ಆರೋಪವೂ ಇದೆ. ಇಂತಹ ಅಪರಾಧ ಹಿನ್ನೆಲೆಯುಳ್ಳ ಲಲಿತ್ ಮೋದಿಯನ್ನು ಕೇಂದ್ರ ಸರ್ಕಾರ ಏಕೆ ರಕ್ಷಿಸುತ್ತಿದೆ? ಲಲತ್ ಮೋದಿ ಕೇಂದ್ರ ಸರ್ಕಾರದ ಸಹಾಯ ಕೇಳಿದರೇ? ಎಂದು ಶರ್ಮಾ ಪ್ರಶ್ನಿಸಿದ್ದಾರೆ.

ಗಂಭೀರ ಆರೋಪಗಳಿದ್ದರೂ ಲಲಿತ್ ಮೋದಿ ಜೆಟ್ ವಿಮಾನದಲ್ಲಿ ಇಡೀ ವಿಶ್ವ ತಿರುಗುತ್ತಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಅವರನ್ನು ಭಾರತಕ್ಕೆ ಕರೆತರುವುದು ಸರ್ಕಾರದ ಕರ್ತವ್ಯವಲ್ಲವೇ? ಆರೋಪ ಹೊತ್ತಿರುವವರಿಗೆ ಕೇಂದ್ರ ಸರ್ಕಾರದ ಅಭಯವೇಕೆ? ಎಂದು ಪ್ರಶ್ನಿಸಿದ್ದಾರೆ.

ಮಾನವೀಯತೆ ದೃಷ್ಟಿಯಿಂದ ಸಹಾಯ ಮಾಡಲಾಗಿದೆ ಎಂಬುದು ಸುಳ್ಳು. ಸುಷ್ಮಾ ಸ್ವರಾಜ್ ಅವರು ಅಪರಾಧವೆಸಗಿದ್ದಾರೆ. ಈ ಬಗ್ಗೆ ಅನುಮಾನವೇ ಬೇಡ ಎಂದರು. ಅಲ್ಲದೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಈವರೆಗೂ ಮಾತನಾಡಿಲ್ಲ. ವಿದೇಶಾಂಗ ಸಚಿವೆ ಸೇರಿ ಅಧಿಕಾರಿಗಳು ಮೌನವಾಗಿರುವುದು ಏಕೆ ಎಂದು ಶರ್ಮಾ ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com