ಅಜಿತ್ ದೋವಲ್ -ಮಯನ್ಮಾರ್ ಅಧ್ಯಕ್ಷರ ಭೇಟಿ: ಭದ್ರತಾ ಸಹಕಾರ ವೃದ್ಧಿ ಬಗ್ಗೆ ಚರ್ಚೆ

ಅಜಿತ್ ದೋವಲ್, ಮಯಾನ್ಮಾರ್ ಅಧ್ಯಕ್ಷ ಥೈನ್‌ ಸೈನ್‌ ಹಾಗೂ ಅಲ್ಲಿನ ರಕ್ಷಣಾ ಇಲಾಖೆ ಮುಖ್ಯಸ್ಥರನ್ನು ಭೇಟಿ ಮಾಡಿದ್ದು ಭದ್ರತಾ ಸಹಕಾರ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಅಜಿತ್ ದೋವಲ್
ಅಜಿತ್ ದೋವಲ್

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮಯಾನ್ಮಾರ್ ಅಧ್ಯಕ್ಷ  ಥೈನ್‌ ಸೈನ್‌ ಹಾಗೂ ಅಲ್ಲಿನ ರಕ್ಷಣಾ ಇಲಾಖೆ ಮುಖ್ಯಸ್ಥರನ್ನು ಭೇಟಿ ಮಾಡಿದ್ದು ಭದ್ರತಾ ಸಹಕಾರ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಭಾರತ- ಮಯನ್ಮಾರ್ ಗಡಿ ಭಾಗದಲ್ಲಿದ್ದ ಉರ್ಗರ ವಿರುದ್ಧ ಕಾರ್ಯಾಚರಣೆ ನಡೆಸಿದ ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಯನ್ಮಾರ್ ಗೆ ಭೇಟಿ ನೀಡಿದ್ದು ಯಶಸ್ವೀ ಮಾತುಕತೆ ನಡೆಸಿದ್ದಾರೆ.  ವಿದೇಶಾಂಗ ಕಾರ್ಯದರ್ಶಿ ಎಸ್.ಜೈ ಶಂಕರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಗಡಿ ಪ್ರದೇಶದಲ್ಲಿ ಭದ್ರತಾ ಸಹಕಾರ ವೃದ್ಧಿ ಬಗ್ಗೆ ಮಹತ್ವದ ಮಾತುಕತೆ ನಡೆದಿದ್ದು ಈಶಾನ್ಯ ಪ್ರದೇಶದಲ್ಲಿರುವ ಭಯೋತ್ಪಾದಕರ ವಿರುದ್ಧ ಮುಂದಿನ ಜಂಟಿ ಕಾರ್ಯಾಚರಣೆ ನಡೆಸುವ ಬಗ್ಗೆಯೂ ಚರ್ಚೆ ನಡೆದಿದೆ.  

ಮಯನ್ಮಾರ್ ಗಡಿ ಪ್ರದೇಶದಲ್ಲಿ ಜು.9 ರಂದು ಉಗ್ರರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯಲ್ಲೂ ಅಜಿತ್ ದೋವಲ್ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಸರ್ಕಾರ ಈಶಾನ್ಯ ಭಾಗದಲ್ಲಿ ಭಯೋತ್ಪಾದಕರ ವಿರುದ್ಧ ಮತ್ತಷ್ಟು ಸೇನಾ ಕಾರ್ಯಾಚರಣೆ ನಡೆಸಲು ಯೋಜನೆ  ರೂಪಿಸಿದೆ. ಈ ಹಿನ್ನೆಲೆಯಲ್ಲಿ ಮಯನ್ಮಾರ್ ಗೆ  ಅಜಿತ್ ದೋವಲ್ ಭೇಟಿ ಮಹತ್ವ ಪಡೆದುಕೊಂಡಿದೆ. ಗಡಿ ಸಹಕಾರಕ್ಕೆ ಸಂಬಂಧಿಸಿದಂತೆ  ಕಳೆದ ವರ್ಷ ಮಯನ್ಮಾರ್ ನೊಂದಿಗೆ ಮಾತುಕತೆ ನಡೆಸಿದ್ದ ಭಾರತ ಸರ್ಕಾರ ಗಡಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿಹಾಕಿತ್ತು. ಇದರಿಂದಾಗಿ ಭದ್ರತಾ ಸಹಕಾರ ಮತ್ತು ಎರಡು ದೇಶಗಳ ಭದ್ರತಾ ಸಂಸ್ಥೆಗಳ ನಡುವೆ ಮಾಹಿತಿ ವಿನಿಮಯಕ್ಕೆ ಪರಿಣಾಮಕಾರಿಯಾಗಿದೆ. ಈ ಪ್ರಕ್ರಿಯೆಯಲ್ಲೂ ಅಜಿತ್ ದೋವಲ್ ಪ್ರಮುಖ ಪಾತ್ರ ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com