ಪ್ರವಾದಿ ಮಹಮದ್ ಕೂಡ ಯೋಗಿಯಾಗಿದ್ದರಂತೆ?

ದೇಶಾದ್ಯಂತ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆ ಯೋಗದ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶಾದ್ಯಂತ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆ ಯೋಗದ ಬಗ್ಗೆ ಇರುವ ತಪ್ಪು ಗ್ರಹಿಕೆ ಹೋಗಲಾಡಿಸಲು ಇಸ್ಲಾಂ ಧರ್ಮ ಮತ್ತು ಯೋಗ ಕ್ಕೆ ಸಂಬಂಧಿಸಿದ ಪುಸ್ತಕ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಮುಸ್ಲಿಂ ಘಟಕ ಮುಸ್ಲಿಂ ರಾಷ್ಟ್ರೀಯ ಮಂಚ್ ನಿಂದ ಪುಸ್ತಕ ರಚನೆಗೆ ಬೇಕಾದ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಪುಸ್ತಕದಲ್ಲಿ ಪ್ರವಾದಿ ಮಹಮದ್ ಕೂಡ ಯೋಗ ಮಾಡುತ್ತಿದ್ದರು ಎಂಬು ಅಂಶವನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ..

ಇನ್ನು ಈ ಪುಸ್ತಕದಲ್ಲಿ ಯೋಗದ ಪರ ವಿರೋದ ನಿಲುವುಗಳನ್ನು ಕೂಡ ಪ್ರಕಟಿಸಲಾಗುತ್ತದೆ. ವಿಶ್ವ ಸಂಸ್ಥೆ ಅಧ್ಯಕ್ಷ ಬಾನ್ ಕಿ ಮೂನ್ ಯೋಗದ ಬಗ್ಗೆ  ನೀಡಿರುವ ಹೇಳಿಕೆಯನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗುತ್ತದಂತೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com