ಅಭಿವೃದ್ಧಿ ಹೆಸರಿನಲ್ಲಿ ಬಡವರ ಹಕ್ಕುಗಳನ್ನು ಕಸಿಯಲಾಗುತ್ತಿದೆ: ರಾಹುಲ್ ಗಾಂಧಿ

ಕೇವಲ ಭರವಸೆಗಳನ್ನು ನೀಡುವ ಮೂಲಕ ಬದಲಾವಣೆ ಅಸಾಧ್ಯ ಅಭಿವೃದ್ಧಿ ಹೆಸರಿನಲ್ಲಿ ಬಡವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ನವದೆಹಲಿ: ಕೇವಲ ಭರವಸೆಗಳನ್ನು ನೀಡುವ ಮೂಲಕ ಬದಲಾವಣೆ ಅಸಾಧ್ಯ ಅಭಿವೃದ್ಧಿ ಹೆಸರಿನಲ್ಲಿ ಬಡವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಾಕಿ ಸಂಬಳ ಪಾವತಿಸುವಂತೆ ಒತ್ತಾಯಿಸಿ ದೆಹಲಿ ಪೌರ ಕಾರ್ಮಿಕರು ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,  ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಹಾಗೂ ದೆಹಲಿ ಸರ್ಕಾರವನ್ನು ಆಗ್ರಹಿಸಿದರು. ಇದು ದೆಹಲಿಯ ಸ್ವಚ್ಛತೆಯ ಹೋರಾಟವಲ್ಲ. ದೇಶದ ಸ್ವಚ್ಛತೆಗಾಗಿ, ಇದು ನಿಮ್ಮ ಗೌರವಕ್ಕಾಗಿ ನಡೆಯುತ್ತಿರುವ ಹೋರಾಟ. ನಾನು ನಿಮ್ಮೊಂದಿಗೆ ಕೈಜೋಡಿಸುತ್ತೇನೆ ಎಂದು ಹೇಳಿದ್ದಾರೆ.

ಬರೀ ಭರವಸೆಗಳನ್ನು ನೀಡುವ ಮೂಲಕ ಬದಲಾವಣೆ ತರಬಹುದು ಎಂದು ಮೋದಿ ಹಾಗೂ ಕೇಜ್ರಿವಾಲ್ ಅವರು ಅಂದುಕೊಂಡಿದ್ದಾರೆ. ಕೇವಲ ಭರವಸೆ ನೀಡುವ ಮೂಲಕ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಇಲ್ಲಿ ನಿಂತು ಒತ್ತಡವನ್ನು ನಿವಾರಿಸುವ ಮೂಲಕ ಬದಲಾವಣೆ ಸಾಧ್ಯ’ ಎಂದು ಕುಟುಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com