ಲಲಿತ್ ಮೋದಿ ಹಗರಣಗಳು ಬೆಳಕಿಗೆ ಬಂದಿದ್ದು ಯುಪಿಎ ಅವಧಿಯಲ್ಲೇ: ಸದಾನಂದಗೌಡ

ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ವಿವಾದ ರಾಜಕೀಯ ವಲಯದಲ್ಲಿ ಬಾರೀ ಬಿರುಗಾಳಿ ಬೀಸಿದೆ. ಯುಪಿಎ ಹಾಗೂ ಬಿಜೆಪಿ ನಡುವಿನ ಕೆಸರೆರೇಚಾಟ..
ಲಲಿತ್ ಮೋದಿ
ಲಲಿತ್ ಮೋದಿ

ನವದೆಹಲಿ: ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ವಿವಾದ ರಾಜಕೀಯ ವಲಯದಲ್ಲಿ ಬಾರೀ ಬಿರುಗಾಳಿ ಬೀಸಿದೆ. ಯುಪಿಎ ಹಾಗೂ ಬಿಜೆಪಿ ನಡುವಿನ ಕೆಸರೆರೇಚಾಟ ತಾರಕಕ್ಕೇರಿಸಿದೆ. ಲಲಿತ್‌ ಮೋದಿ ಹಗರಣ ಬೆಳಕಿಗೆ ಬಂದಿದ್ದು ಯುಪಿಎ ಸರ್ಕಾರದ ಅವಧಿಯಲ್ಲಿ. ಆ ಸಂದರ್ಭದಲ್ಲಿ ಕಾಂಗ್ರೆಸ್‌ ಏಕೆ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಲಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಮಾನವೀಯತೆಯ ಮೇಲೆ ಲಲಿತ್ ಮೋದಿಗೆ ವೀಸಾ ನೆರವು ನೀಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಪಟ್ಟುಹಿಡಿದಿರುವ ಹಿನ್ನೆಲೆಯಲ್ಲಿ ಸದಾನಂದಗೌಡ ಅವರು ಪ್ರತಿಕ್ರಿಯಿಸಿದ್ದಾರೆ.

ದೇಶದಲ್ಲಿ ಕಾಂಗ್ರೆಸ್‌ ನೆಲೆ ಕಳೆದುಕೊಳ್ಳುತ್ತಿದೆ. ಇಲ್ಲಿಯವರೆಗೂ ಕಾಂಗ್ರೆಸ್ ಗೆ ಆರೋಪ ಮಾಡಲು ಬಿಜೆಪಿಯ ಯಾವ ವಿವಾದಗಳು ದೊರೆಕಿಲ್ಲ. ಆದ್ದರಿಂದ, ಕಾಂಗ್ರೆಸ್‌ ಮಾನವೀಯ ವಿಷಯವನ್ನೇ ದೊಡ್ಡದಾಗಿ ಬಿಂಬಿಸುತ್ತಿದೆ ಎಂದು ಟೀಕಿಸಿದರು.

ಲಲಿತ್‌ ಮೋದಿ 700 ಕೋಟಿ ರೂಪಾಯಿ ಅವ್ಯವಹಾರ ನಡೆಸಿದ್ದು ಯುಪಿಎ ಸರ್ಕಾರದ ಅವಧಿಯಲ್ಲಿ. ಆಗ ಕಾಂಗ್ರೆಸ್‌ ಯಾವುದೇ ಕ್ರಮ ಕೈಗೊಳ್ಳದೆ ಮೌನವಾಗಿ ಇದ್ದದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಸುಷ್ಮಾ ಸ್ವರಾಜ್‌ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸದಾನಂದ ಗೌಡ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com