ಕೇಜ್ರಿವಾಲ್ - ಅಡ್ವಾಣಿ ಭೇಟಿ ದಿಢೀರ್ ರದ್ದು

ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರೊಂದಿಗಿನ ತಮ್ಮ ಭೇಟಿಯನ್ನು ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರದ್ದುಗೊಳಿಸಿದ್ದಾರೆ.
ಎಲ್.ಕೆ ಅಡ್ವಾಣಿ
ಎಲ್.ಕೆ ಅಡ್ವಾಣಿ

ನವದೆಹಲಿ: ಜೂ.19 ರ ಸಂಜೆ 6 ಗಂಟೆಗೆ ನಿಗದಿಯಾಗಿದ್ದ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರೊಂದಿಗಿನ ತಮ್ಮ ಭೇಟಿಯನ್ನು ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರದ್ದುಗೊಳಿಸಿದ್ದಾರೆ.

ಪೂರ್ವನಿಗದಿಯ ಕಾರ್ಯಕ್ರಮಗಳಿರುವುದರಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಡ್ವಾಣಿ ಭೇಟಿ ಕಾರ್ಯಕ್ರಮ ರದ್ದುಗೊಳಿಸಿರುವುದಕ್ಕೆ ಕಾರಣ ನೀಡಿದ್ದಾರೆ. ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಎದುರಾದರೂ ಅಚ್ಚರಿಯಿಲ್ಲ ಎಂದು ಹೇಳಿದ್ದ ಬೆನ್ನಲ್ಲೇ ಅಡ್ವಾಣಿ ಅವರನ್ನು ಭೇಟಿ ಮಾಡಲು ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದರು. ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಹಾಗೂ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರ ಸಂಭಾವ್ಯ ಭೇಟಿಯಿಂದ ಬಿಜೆಪಿ ಹಾಗೂ ಆರ್.ಎಸ್.ಎಸ್ ಗೆ ಆತಂಕ ಉಂಟಾಗಿತ್ತು ಎಂದು ವಿಶ್ಲೇಷಿಸಲಾಗಿದೆ.

ಕೇಜ್ರಿವಾಲ್ ಅವರೊಂದಿಗಿನ ಭೇಟಿ ಕಾರ್ಯಕ್ರಮವನ್ನು ಏಕಾಏಕಿ ರದ್ದುಗೊಳಿಸಿರುವ ಅಡ್ವಾಣಿ ಇನ್ನೂ ಒಂದು ವಾರಗಳ ಕಾಲ ತಮಗೆ ಬಿಡುವಿಲ್ಲ ಎಂದು ತಿಳಿಸಿದ್ದಾರೆ. ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಬರುವ ಸಾಧ್ಯತೆ ಇದೆ ಎಂಬ ಹೇಳಿಕೆಗೆ ಸಹಮತ ಸೂಚಿಸಿದ್ದ ಅರವಿಂದ್ ಕೇಜ್ರಿವಾಲ್, ಅಡ್ವಾಣಿ ಅವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com