ಪ್ರಧಾನಿ ಮೋದಿ ಲಲಿತ್ ಆಸನದಲ್ಲಿ ಕುಳಿತಿದ್ದಾರೆ: ಕಾಂಗ್ರೆಸ್ ಲೇವಡಿ

ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಟು ಟೀಕೆಗಳಿಗೆ ಜಗ್ಗದ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಟೀಕಿಸಲು ಕಾಂಗ್ರೆಸ್ ಯೋಗದಲ್ಲಿ...
ಜೈರಾಮ್ ರಮೇಶ್
ಜೈರಾಮ್ ರಮೇಶ್

ನವದೆಹಲಿ: ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಟು ಟೀಕೆಗಳಿಗೆ ಜಗ್ಗದ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಟೀಕಿಸಲು ಕಾಂಗ್ರೆಸ್ ಯೋಗದಲ್ಲಿ ಹೊಸ ಆಸನವನ್ನು ಸೃಷ್ಠಿಸಿದ್ದಾರೆ. ಅದು ಲಲಿತ್ ಮೋದಿ ಆಸನ...!

ಲಲಿತ್ ಮೋದಿ ಆಸನದಲ್ಲಿ ಕುಳಿತಿರುವ ಪ್ರಧಾನಿ ಮೋದಿ ಅವರು ತಮ್ಮ ಕಿವಿ, ಮೂಗು, ಕಣ್ಣು ಮತ್ತು ಬಾಯಿಯನ್ನು ಮುಚ್ಚಿಕೊಂಡಿದ್ದು. ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ನಂತರ ಲಲಿತ್ ಆಸನದಿಂದ ಸಹಜ ಲೋಕಕ್ಕೆ ಬರುತ್ತಾರೆ ಎಂಬ ಭರವಸೆ ಇದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಲೇವಡಿ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಯನ್ನು ಅದ್ಧೂರಿಯಾಗಿ ಯೋಜನೆ ಮಾಡುವ ಸಿದ್ಧತೆಯಲ್ಲಿರುವ ಪ್ರಧಾನಿ ಮೋದಿ ಅವರು, ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ್ ಮುಖ್ಯಮಂತ್ರಿ ವಸುಂದರಾ ರಾಜೇ ಅವರ ರಾಜಿನಾಮೆ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com