

ಕೊಯಂಬತ್ತೂರು: ಕೊಯಂಬತ್ತರಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಇದ್ದಕ್ಕಿದ್ದಂತೆ ಹಳಿತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಚೆನ್ನೈನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಕೊಯಂಬತ್ತೂರಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಿಗ್ಗೆ 7.15 ರ ಸುಮಾರಿಗೆ ಹೊರಡಬೇಕಿತ್ತು. ಆದರೆ, ಕಾರಣಾಂತರಿಗಳಿಂದ ರೈಲು ಹೊರಡುವ ಸಮಯವನ್ನು 10.30ಕ್ಕೆ ಮುಂದೂಡಲಾಗಿತ್ತು. ಇದರಂತೆ ಇಂದು ಬೆಳಿಗ್ಗೆ ರೈಲು ಹೊರಡಲು ಪ್ರಾರಂಭಿಸಿದಾಗ ಖಾಲಿ ಇದ್ದ 5 ಬೋಗಿಗಳು ಇದ್ದಕ್ಕಿದ್ದಂತೆ ಹಳಿ ತಪ್ಪಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸುತ್ತಿದ್ದಾರೆ.