ದೆಹಲಿ ವಿವಿ ಪ್ರಾದ್ಯಾಪಕನಿಂದ ವಿದ್ಯಾರ್ಥಿನಿಗೆ 2 ವರ್ಷದಿಂದ ಲೈಂಗಿಕ ಕಿರುಕುಳ

ದೆಹಲಿ ವಿಶ್ವವಿದ್ಯಾನಿಲಯದ ಸೇಂಟ್ ಸ್ಟೀಫನ್ ಕಾಲೇಜಿನ ಸಹಾಯಕ ಪ್ರಾದ್ಯಾಪಕರೊಬ್ಬರು ಸತತ ಎರಡು ವರ್ಷಗಳಿಂದ ವಿದ್ಯಾರ್ಥಿನಿಗೆ ...
ದೆಹಲಿ ವಿಶ್ವವಿದ್ಯಾನಿಲಯ
ದೆಹಲಿ ವಿಶ್ವವಿದ್ಯಾನಿಲಯ

ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಸೇಂಟ್ ಸ್ಟೀಫನ್ ಕಾಲೇಜಿನ ಸಹಾಯಕ ಪ್ರಾದ್ಯಾಪಕರೊಬ್ಬರು ಸತತ ಎರಡು ವರ್ಷಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ರಸಾಯನ ಶಾಸ್ತ್ರ ಪ್ರಾಧ್ಯಾಪಕ ಸತೀಶ್ ಕುಮಾರ್ ಕಳೆದ 2 ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ. ಅಕ್ಟೋಬರ್ 2013 ರಿಂದ  ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರಲಾಗಿದೆ.

ಸೆಕ್ಷನ್ 354 ರ ಅಡಿಯಲ್ಲಿ  ಸತೀಶ್ ಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇನ್ನು ಈ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ ಸಂಘ ಸತೀಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿದೆ.
ಕಾಲೇಜು ಪ್ರಾಂಶುಪಾಲ ವಲ್ಸನ್ ತಂಪ್ ಸತೀಶ್ ಕುಮಾರ್ ಅವರನ್ನು ರಕ್ಷಿಸಲು ಯತ್ನಿಸಿದರು ಎಂದು ಆಕೆ ದೂರಿನಲ್ಲಿ ವಿವರಿಸಿದ್ದಾಳೆ. ಜೊತೆಗೆ ತನ್ನ ಪಿಎಚ್ ಡಿ ಪದವಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಕರಿಸಬೇಕೆಂದು ಆಕೆ ಮನವಿ ಕೊಂಡಿದ್ದಾಳೆ.

 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com