
ತಿರುವನಂತಪುರ: ವಿದ್ಯಾರ್ಥಿಗಳಿಗೆ ನೀಡುವ ಶೈಕ್ಷಣಿಕ ಸಾಲಕ್ಕೆ ಎಲ್ಲಾ ಬ್ಯಾಂಕ್ ಗಳು ಏಕ ರೀತಿಯ ನಿಯಮ ಪಾಲಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಒಮನ್ ಚಾಂಡಿ ಸೂಚನೆ ನೀಡಿದ್ದಾರೆ.
ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬ್ಯಾಂಕ್ ಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲು ವಿಭಿನ್ನ ರೀತಿಯ ಪ್ರಕ್ರಿಯೆಗಳನ್ನು ಅನುಸರಿಸುತ್ತಿವೆ. ಬಡ್ಡಿ ದರ ಹಾಗೂ, ಸಾಲ ಮರುಪಾವತಿ ಮಾಡುವ ಸಂದರ್ಭದಲ್ಲಿ ಕೆಲವೊಂದು ಷರತ್ತುಗಳನ್ನು ಅನುಸರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ, ಹೀಗಾಗಿ ಎಲ್ಲಾ ಬ್ಯಾಂಕ್ ಗಳು ಏಕ ರೀತಿ ನಿಯಮ ಜಾರಿಗೆ ತರಲು ಅವರು ಸಲಹೆ ನೀಡಿದ್ದಾರೆ.
ಇನ್ನು ಕಲಹ ಪೀಡಿತ ರಾಷ್ಟ್ರಗಳಾದ ಸಿರಿಯಾ, ಲಿಬಿಯಾ, ಇರಾಕ್ ನಂತಹ ರಾಷ್ಟ್ರಗಳಿಗೆ ಪುನರ್ವಸತಿ ಕಲ್ಪಿಸಲು ಸಹಾಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಬ್ಯಾಂಕ್ ಗಳು ಈ ರಾಜ್ಯ ಸರ್ಕಾರಕ್ಕೆ ಪೂರಕವಾಗಿ ಸ್ಪಂದಿಸುತ್ತಿಲ್ಲ. ಜೊತೆಗೆ ರಾಜ್ಯದ ವಸತಿ ಯೋಜನೆಗಳ ಅನುಷ್ಠಾನಕ್ಕೆ ಬ್ಯಾಂಕ್ ಗಳ ಸಹಾಯ ಅಗತ್ಯ ಎಂದು ಒಮನ್ ಚಾಂದಿ ಹೇಳಿದರು.
Advertisement