ಸಮಯಕ್ಕೆ ಸರಿಯಾಗಿ ಕಚೇರಿಗೆ ಬನ್ನಿ ಇಲ್ಲದಿದ್ದರೇ ಶಿಸ್ತು ಕ್ರಮ ಎದುರಿಸಲು ಸಿದ್ದರಾಗಿ

ಸರ್ಕಾರಿ ನೌಕರರು ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ ಎಂಬ ಆರೋಪಗಳು ಪದೇ ಪದೇ ಕೇಳಿ ಬಂದ ಹಿನ್ನೆಲೆಯಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸರ್ಕಾರಿ ನೌಕರರು ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ ಎಂಬ ಆರೋಪಗಳು ಪದೇ ಪದೇ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸರ್ಕಾರಿ ನೌಕರರ ವಿರುದ್ಧ ಕೆಂಡ ಕಾರಿದೆ. ಜೊತೆಗೆ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ,

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯದ ನೌಕರರು ಸರಿಯಾದ ವೇಳೆಗೆ ಕೆಲಸಕ್ಕೆ ಹಾಜಗಾರುವಂತೆ ಲಿಖಿತ ಸೂಚನೆ ನೀಡಿದೆ. ದೇಶಾದ್ಯಂತ ಒಟ್ಟು 42 ಲಕ್ಷ ಮಂದಿ ಕೇಂದ್ರ ಸರ್ಕಾರಿ ನೌಕರರಿದ್ದು ಎಲ್ಲರೂ ಈ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿದೆ.

ಇನ್ನು ಮುಂದೆ ನೌಕರರು ತಮ್ಮ ಹಾಜರಾತಿಯನ್ನು ಪುಸ್ತಕದಲ್ಲಿ ಟಿಕ್ ಮಾಡುವಂತಿಲ್ಲ. ಬದಲಿಗೆ ಬಯೋ ಮೆಟ್ರಿಕ್ ಕಾರ್ಡ್ ಪದ್ದತಿಯನ್ನು ಶೀಘ್ರವೇ ಜಾರಿಗೆ ತರುವುದಾಗಿ ಇಲಾಖೆ ತಿಳಿಸಿದೆ. ಇದರಿಂದ ಕಚೇರಿಯಲ್ಲಿ ಶಿಸ್ತು ಪಾಲನೆಯಾಗುತ್ತದೆ ಎಂದು ಇಲಾಖೆ ಅಭಿಪ್ರಾಯ ಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com