ಲಲಿತ್ ಮೋದಿ ಪ್ರಕರಣ: ನರೇಂದ್ರ ಮೋದಿ ವಿರುದ್ಧ ಸಚಿನ್ ಪೈಲಟ್ ವಾಗ್ದಾಳಿ

ಕೇಂದ್ರ ಎನ್ ಡಿ ಎ ಸರ್ಕಾರ ಲೋಕಸಭೆ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ನೀಡಿದ್ದ ಭ್ರಷ್ಟಾಚಾರ ಮುಕ್ತ ಸರ್ಕಾರದ ಆಶ್ವಾಸನೆಯನ್ನು ಈಡೇರಿಸಿಲ್ಲ
ಸಚಿನ್ ಫೈಲಟ್
ಸಚಿನ್ ಫೈಲಟ್
Updated on: 

ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರ ಲೋಕಸಭೆ ಚುನಾವಣೆ  ವೇಳೆ ಪ್ರಣಾಳಿಕೆಯಲ್ಲಿ ನೀಡಿದ್ದ ಭ್ರಷ್ಟಾಚಾರ ಮುಕ್ತ ಸರ್ಕಾರದ ಆಶ್ವಾಸನೆಯನ್ನು ಈಡೇರಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಆರೋಪಿಸಿದ್ದಾರೆ.  ಆರೋಪ ಹೊತ್ತಿರುವ ಸಚಿವರ ರಾಜೀನಾಮೆ ಪಡೆಯಬೇಕೆಂದು ಅವರು ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜಸ್ತಾನ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ವಸುಂದರಾ ರಾಜೇ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣದ ಸತ್ಯಾಸತ್ಯತೆ ತಿಳಿದಿರುವ ಬಿಜೆಪಿ ಇದಿವರೆಗೂ ವಸುಂದರಾ ರಾಜೇ ಮತ್ತು ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೇಳಲಿಲ್ಲ. ಇದರಿಂದ ಬಿಜೆಪಿಯ ಧ್ವಂಧ್ವ ನೀತಿ ಅರ್ಥವಾಗುತ್ತದೆ ಎಂದು ದೂರಿದರು.

ವಸುಂದರಾ ರಾಜೇ ಪುತ್ರ ದುಶ್ಯಂತ್ ಸಿಂಗ್ ಖಾತೆಗೆ ಅಕ್ರಮವಾಗಿ ಬಂದಿರುವ ಹಣದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ ಅವರು ವಸುಂದರಾ ರಾಜೇ ರಾಜೀನಾಮೆ ನೀಡುವವರೆಗೆ ಬೀದಿಗಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com