

ನವದೆಹಲಿ: ತುರ್ತು ಪರಿಸ್ಥಿತಿ ಸ್ವಾತಂತ್ರ್ಯೋತ್ತರ ಭಾರತದ ರಾಜಕೀಯ ಇತಿಹಾಸದಲ್ಲಿ ಮಾಸಲಾರದ ಕಪ್ಪು ಚುಕ್ಕೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಕರಾಳ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 40 ವರ್ಷಗಳಾಗಿದ್ದು, ಕರಾಳ ದಿನಗಳು ಇನ್ನೂ ನನ್ನ ನೆನಪಿನಂಗಳದಲ್ಲಿ ಅಚ್ಚಳಿಯದೆ ಉಳಿದಿದೆ. ತುರ್ತುಪರಿಸ್ಥಿತಿ ವಿರೋಧಿ ಆಂದೋಲನ ಒಂದು ವಿಶಿಷ್ಟ ಅನುಭವ ನೀಡಿತ್ತು. ಈ ಆಂದೋಲನದಿಂದ ಸಾಕಷ್ಟು ಪಾಠ ಕಲಿತಿದ್ದೇನೆ ಎಂದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರಿಗೆ ಜಯಪ್ರಕಾಶ್ ನಾರಾಯಣ್ ಅವರು ಸಿಂಹ ಸ್ವಪ್ನರಾಗಿದ್ದರು. ಜಯಪ್ರಕಾಶ್ ನಾರಾಯಣ್ ಹೋರಾಟಕ್ಕೆ ದೇಶದೆಲ್ಲಡೆ ಅಪಾರ ಜನಬೆಂಬಲ ದೊರೆತಿತ್ತು. ಜೆಪಿ ನೇತೃತ್ವದ ಹೋರಾಟ ಎಂದಿಗೂ ಮರೆಯುವಂತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.