ಉತ್ತರ ಭಾರತದಲ್ಲಿ ಭಾರೀ ಮಳೆ: ಪ್ರವಾಹ ಭೀತಿಯಲ್ಲಿ ಜನರು

ಉತ್ತರ ಭಾರತದಾದ್ಯಂತ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ಪ್ರವಾಹ ಭೀತಿಯುಂಟಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...
ಉತ್ತರ ಭಾರತದಲ್ಲಿ ಭಾರೀ ಮಳೆ: ಪ್ರವಾಹ ಭೀತಿಯಲ್ಲಿ ಜನರು (ಸಾಂದರ್ಭಿಕ ಚಿತ್ರ)
ಉತ್ತರ ಭಾರತದಲ್ಲಿ ಭಾರೀ ಮಳೆ: ಪ್ರವಾಹ ಭೀತಿಯಲ್ಲಿ ಜನರು (ಸಾಂದರ್ಭಿಕ ಚಿತ್ರ)

ನವದೆಹಲಿ: ಉತ್ತರ ಭಾರತದಾದ್ಯಂತ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ಪ್ರವಾಹ ಭೀತಿಯುಂಟಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಉತ್ತರ ಭಾರತದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಲವೆಡೆ ರಸ್ತೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಮಳೆಯ ಅಬ್ಬರಕ್ಕೆ ಕೇದಾರನಾಥ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ತಂದೊಡ್ಡಿರುವ ಸಂಕಷ್ಟಕ್ಕೆ ಯಾತ್ರಿಕರು ನಡುರಸ್ತೆಯಲ್ಲೇ ಪರದಾಡುವಂತಾಗಿದೆ.

ಸಂಗಮ ನದಿ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಈಗಾಗಲೇ ಅಪಾಯ ಮಟ್ಟ ತಲುಪುತ್ತಿದ್ದು, ಸ್ಥಳೀಯ ಪ್ರದೇಶಗಳಲ್ಲಿ ಪ್ರವಾಹ ಭೀತಿಯುಂಟಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ನದಿ ತೀರ ಪ್ರದೇಶದಲ್ಲಿ ವಾಸಿಸುವ ಜನರು ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಇನ್ನು 48 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ  

ಇನ್ನುಳಿದಂತೆ ಗುಜಾರಾತ್ ನಲ್ಲಿ ಈಗಾಗಲೇ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯ ಆರ್ಭಟಕ್ಕೆ 34 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com