ಜಗದೀಶ್ ಟೈಟ್ಲರ್ ವಿರುದ್ಧ ಹೊಸ ಎಫ್ಐಆರ್ ಇಲ್ಲ: ಸಿಬಿಐ ಸ್ಪಷ್ಟನೆ

ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಿಸಿಲ್ಲ ಎಂದು ಸಿಬಿಐ ದೆಹಲಿ ಕೋರ್ಟ್ ಗೆ ಸ್ಪಷ್ಟನೆ ನೀಡಿದೆ.
ಜಗದೀಶ್ ಟೈಟ್ಲರ್
ಜಗದೀಶ್ ಟೈಟ್ಲರ್

ನವದೆಹಲಿ: 1984 ಸಿಖ್ ನರಮೇಧ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿದ್ದ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಿಸಿಲ್ಲ ಎಂದು ಸಿಬಿಐ ದೆಹಲಿ ಕೋರ್ಟ್ ಗೆ ಸ್ಪಷ್ಟನೆ ನೀಡಿದೆ.

ಜಗದೀಶ್ ಟೈಟ್ಲರ್ ವಿರುದ್ಧ ಸಿಖ್ ವಿರೋಧಿ ದಂಗೆ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಿರುವ ಹಾಗೂ ಹಣ ದುರುಪಯೋಗ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸೆಕ್ಷನ್ 193 ಅಡಿಯಲ್ಲಿ ಹೊಸ ಎಫ್ಐಆರ್ ದಾಖಲಿಸಲಾಗಿದೆಯೇ ಎಂದು ದೆಹಲಿ ಕೋರ್ಟ್ ಸಿಬಿಐ ಗೆ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್ ಗೆ ಸ್ಪಷ್ಟನೆ ನೀಡಿದೆ.

ಸುಳ್ಳು ಹೇಳುವಂತೆ ಸಾಕ್ಷಿಗಳ ಮೇಲೆ ಒತ್ತಡ ಹೇರಿದ್ದರ ಆರೋಪದಲ್ಲಿ ಜಗದೀಶ್ ಟೈಟ್ಲರ್ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಮಾಹಿತಿ ಕೇಳಿ ಸಿಖ್ ದಂಗೆಯ ಸಂತ್ರಸ್ತರೊಬ್ಬರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಯಿಂದ ಸ್ಪಷ್ಟನೆ ದೊರೆತಿರುವ ಹಿನ್ನೆಲೆಯಲ್ಲಿ ಕೋರ್ಟ್ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

ಟೈಟ್ಲರ್ ಗೆ ಕ್ಲೀನ್ ಚಿಟ್ ನೀಡಿರುವ ಸಿಬಿಐ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಕೋರ್ಟ್ ಜುಲೈ 30 ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com