

ಇಂದೋರ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ನರೇಂದ್ರ ಸಿಂಗ್ ತೋಮರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಿಂದ ಇಂದೋರ್ ಜೈಲಿನಲ್ಲಿದ್ದ ನರೇಂದ್ರ ಸಿಂಗ್ ತೋಮರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ಇಂದೋರ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 24 ಮಂದಿ ಮೃತಪಟ್ಟಿದ್ದಾರೆ.