ಡೆಡ್ ಎಂಡ್‌ಗೆ ಡಿಕ್ಕಿ ಹೊಡೆದು, ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು

ಮುಂಬೈನ ಚರ್ಚ್ ಗೇಟ್ ರೈಲ್ವೆ ನಿಲ್ದಾಣದಲ್ಲಿ ಲೋಕಲ್ ರೈಲೊಂದು ಚಾಲಕನ ನಿಯಂತ್ರಣ ತಪ್ಪಿ ಡೆಡ್ ಎಂಡ್‌ಗೆ ಡಿಕ್ಕಿ ಹೊಡೆದು, ಬಳಿಕ...
ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು
ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು
Updated on: 

ಮುಂಬೈ: ಮುಂಬೈನ ಚರ್ಚ್ ಗೇಟ್ ರೈಲ್ವೆ ನಿಲ್ದಾಣದಲ್ಲಿ ಲೋಕಲ್ ರೈಲೊಂದು ಚಾಲಕನ ನಿಯಂತ್ರಣ ತಪ್ಪಿ ಡೆಡ್ ಎಂಡ್‌ಗೆ ಡಿಕ್ಕಿ ಹೊಡೆದು, ಬಳಿಕ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಭಾನುವಾರ ನಡೆದಿದೆ.

ನಿನ್ನೆ 11.20ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಈ ರೈಲು ಭಯಂದರ್‌ದಿಂದ ಚರ್ಚ್‌ಗೇಟ್ ರೇಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿತ್ತು. ಆದರೆ ರೈಲಿನ ಚಾಲಕ ಸರಿಯಾದ ಸಮಯಕ್ಕೆ ಬ್ರೇಕ್ ಹಾಕದೇ ಇರುವುದರಿಂದ ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com