ಲಲಿತ್ ಮೋದಿ ವಿವಾದ: ಸುಷ್ಮಾ, ರಾಜೇ ರಾಜಿನಾಮೆ ನೀಡಲಿ; ಆರ್‌ಎಸ್‌ಎಸ್

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ...
ವಸುಂಧರಾ ರಾಜೇ - ಸುಷ್ಮಾ ಸ್ವರಾಜ್
ವಸುಂಧರಾ ರಾಜೇ - ಸುಷ್ಮಾ ಸ್ವರಾಜ್

ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಒತ್ತಾಯಿಸಿದೆ.

ಈ ಸಂಬಂಧ ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್ ಹಿರಿಯ ನಾಯಕ ಗೋವಿಂದಾಚಾರ್ಯ ಅವರು, ಜನ ಸಾಮಾನ್ಯರ ದೃಷ್ಟಿಯಲ್ಲಿ ಲಲಿತ್ ಮೋದಿ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಹಾಗೂ ವಸುಂಧರಾ ರಾಜೇ ಅವರ ಪಾತ್ರ ಸ್ಪಷ್ಟವಾಗಿದ್ದು, ಇವರಿಬ್ಬರೂ ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ವಜಾ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ನಾಯಕರಿಗೆ ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಅವರು ಮಾದರಿಯಾಗಲಿ ಎಂದಿರುವ ಆರ್‌ಎಸ್‌ಎಸ್ ನಾಯಕ, ಪಕ್ಷದ ಗೌರವಕ್ಕಿಂತ ಯಾವುದೇ ವ್ಯಕ್ತಿ ಮುಖ್ಯವಾಗಬಾರದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com