ಕೇಜ್ರಿವಾಲ್ ಭೇಟಿ ಮಾಡಲು ಪ್ರಧಾನಿ ಮೋದಿ ನಿರಾಕರಣೆ: ಆಪ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ...
ಅರವಿಂದ್ ಕೇಜ್ರಿವಾಲ್ ಮತ್ತು ನರೇಂದ್ರ ಮೋದಿ
ಅರವಿಂದ್ ಕೇಜ್ರಿವಾಲ್ ಮತ್ತು ನರೇಂದ್ರ ಮೋದಿ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕಳೆದ ವಾರ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ಹತ್ತು ದಿನಗಳ ಹಿಂದೆ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮಾಡಲು ಅವಕಾಶ ನೀಡುವಂತೆ ಕೋರಿ ಪತ್ರ ಬರೆದಿದ್ದರು. ನಜೀಬ್ ಜಂಗ್ ವಿಚಾರ ಸೇರಿದಂತೆ ಇತರ ಐದು ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಅನುಮತಿ ಕೋರಿ ಪತ್ರ ಬರೆಯಲಾಗಿತ್ತು ಆದರೆ, ಇದಕ್ಕೆ ಪ್ರಧಾನಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕೇಜ್ರಿವಾಲ್ ಅವರ ಸಲಹೆ ಗಾರ ನಾಗೇಂದ್ರ ಶರ್ಮಾ ಹೇಳಿದ್ದಾರೆ.

ಮೋದಿ ಅವರಿಗೆ ಇತರರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಸಮಯವಿರುತ್ತದೆ. ಆದರೆ, ದೆಹಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಇವರಿಗೆ ಸಮಯವಿಲ್ಲ ಎಂದು ಕಿಡಿಕಾರಿದ ಅವರು, ಕೇಜ್ರಿವಾಲ್ ಮತ್ತು ರಾಜನಾಥ್ ಅವರ ಭೇಟಿ ತೃಪ್ತಿ ತಂದಿಲ್ಲ. ಈ ಹಿನ್ನಲೆಯಲ್ಲಿ ಪ್ರಧಾನಿ ಅವರೊಂದಿಗೆ ವಿಷಯಗಳನ್ನು ಚರ್ಚಿಸಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com