ಸತತ ಸೋಲು: ಸರ್ಜರಿಗೆ ಮುಂದಾದ ಕಾಂಗ್ರೆಸ್

ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ ಭರ್ಜರಿ ಸರ್ಜರಿಗೆ ಮುಂದಾಗಿದ್ದು, ಸೋಮವಾರ ಐದು ರಾಜ್ಯಗಳ ಪ್ರದೇಶ ಕಾಂಗ್ರೆಸ್...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)

ನವದೆಹಲಿ: ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ ಭರ್ಜರಿ ಸರ್ಜರಿಗೆ ಮುಂದಾಗಿದ್ದು, ಸೋಮವಾರ ಐದು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳನ್ನು ಬದಲಾವಣೆ ಮಾಡಿದೆ.

ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಟ್ಟಾಭಿಷೇಕಕ್ಕೆ ಕಾಂಗ್ರೆಸ್ ಮುಂದಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಎಲ್ಲಾ ರಾಜ್ಯಗಳಲ್ಲೂ ರಾಹುಲ್ ನಿಷ್ಠರನ್ನು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತಿದೆ. ಶೂನ್ಯ ಸಂಪಾದನೆ ಮಾಡಿದ ದೆಹಲಿ ಕಾಂಗ್ರೆಸ್‌ಗೆ ಪುನಶ್ಚೇತನ ಮಾಡಲು ಕೇಂದ್ರದ ಮಾಜಿ ಸಚಿವ ಅಜಯ್‌ ಮಕ್ಕೇನ್ ಅವರನ್ನು ದೆಹಲಿ ಪ್ರದೇಶ ಕಾಂಗ್ರೆಸ್‌ಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ತೆಲ್ಲಂಗಾಣ ನೂತನ ರಾಜ್ಯಕ್ಕೆ ಉತ್ತಮರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಶಾಸಕರಾದ ಮಲ್ಲುಬಾತಿ ವಿಕ್ರಮಾಕ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಹಾರಾಷ್ಟ್ರದಲ್ಲಿ ಅಶೋಕ್ ಚವ್ಹಾಣ್ ಅವರನ್ನು ನೇಮಿಸಲಾಗಿದ್ದು, ಮುಂಬೈ ವಲಯವಾರು ಕಾಂಗ್ರೆಸ್‌ಗೆ ಸಂಜಯ್‌ನಿರುಪಮಾ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.  ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್‌ಗೆ ಮಾಜಿ ಸಚಿವ ಗುಲಾಂ ಅಹಮ್ಮದ್ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿದ್ದು, ಗುಜರಾತ್ ರಾಜ್ಯಕ್ಕೆ ಭರತ್‌ಸಿನ್ಹಾ ಸೋಲಂಕಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಡಾ.ಜಿ ಪರಮೇಶ್ವರ ಸ್ಥಾನಕ್ಕೂ ಕುತ್ತು..?
ಕಾಂಗ್ರೆಸ್ ಪಕ್ಷದಲ್ಲಿನ ಮಹತ್ವದ ಬೆಳವಣಿಗೆಗಳನ್ನು ಗಮನಿಸಿದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನೂ ಬದಲಾಯಿಸುವ ಸಾಧ್ಯತೆಗಳು ದಟ್ಟವಾಗಿ ಹರಡಿವೆ. ಈಗಾಗಲೇ 5 ವರ್ಷ ಅಧಿಕಾರಾವಧಿ ಪೂರ್ಣಗೊಳಿಸಿರುವ ಪರಮೇಶ್ವರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಾಯಿಸಿ ಸರ್ಕಾರದ ಭಾಗವಾಗಿ ಕೆಲಸ ಮಾಡುವ ಜವಾಬ್ದಾರಿ ವಹಿಸಬೇಕೆಂಬ ಒತ್ತಾಯಗಳು ಕೇಳಿ ಬಂದಿವೆ. ಈ ನಡುವೆ ಜಮ್ಮು-ಕಾಶ್ಮೀರದ ವಿರೋಧ ಪಕ್ಷದ ನಾಯಕ ಆಯ್ಕೆಗೆ ಕರ್ನಾಟಕದವರಾದ ಬಿ.ಕೆ.ಹರಿಪ್ರಸಾದ್ ಅವರನ್ನು ಉಸ್ತುವಾರಿ ನಾಯಕರನ್ನಾಗಿ ನೇಮಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com