

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ಜಗ್ವಾರ್ ಯುದ್ಧ ವಿಮಾನ ಹರಿಯಾಣದ ಶಹಬಾದ್ ಬಳಿ ಗುರುವಾರ ಪತನಗೊಂಡಿದೆ.
ಘಟನೆಯಲ್ಲಿ ವಿಮಾನದ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ. ತಾಂತ್ರಿಕ ದೋಷವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ ಎಂದು ಕುರುಕ್ಷೇತ್ರದ ಪೊಲೀಸ್ ವರಿಷ್ಠಾಧಿಕಾರಿ ಸಿಮರ್ ದೀಪ್ ಸಿಂಗ್ ತಿಳಿಸಿದ್ದಾರೆ.
ಅಂಬಾಲಾದಿಂದ ಸುಮಾರು 20 ಕಿ.ಮೀ ದೂರದಲ್ಲಿ ಮಧ್ಯಾಹ್ನ 1.15ಕ್ಕೆ ವಿಮಾನ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ ಅಧಿಕಾರಿಗಳು ಹೇಳಿದ್ದಾರೆ.