ಪರಸ್ಪರ ಗುಂಡು ಹಾರಿಸಿಕೊಂಡು ಇಬ್ಬರು ಪೇದೆಗಳು ಸಾವು

ಪರಸ್ಪರ ಗುಂಡು ಹಾರಿಸಿಕೊಂಡು ಇಬ್ಬರು ಪೇದೆಗಳು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ಸೋಮವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಪಾಟ್ನಾ: ಪರಸ್ಪರ ಗುಂಡು ಹಾರಿಸಿಕೊಂಡು ಇಬ್ಬರು ಪೇದೆಗಳು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ಸೋಮವಾರ ನಡೆದಿದೆ.

ಪಾಟ್ನಾದಲ್ಲಿರುವ ಬಿಕ್ರಂ ಬ್ಲಾಕ್ ಕಚೇರಿಯಲ್ಲಿ ಪರಸ್ಪರ ಗುಂಡು ಹಾರಿಸಿಕೊಂಡು ಇಬ್ಬರು ಪೇದೆಗಳು ಮೃತಪಟ್ಟಿದ್ದಾರೆ ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧಿಕಾರಿ ಜೀತೇಂದ್ರ ರಾಣಾ ಹೇಳಿದ್ದಾರೆ.

ಇಬ್ಬರ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ವಾದ ವಿವಾದಗಳು ನಡೆದು, ಕೋಪ ವಿಕೋಪಕ್ಕೆ ತಿರುಗಿ, ಪರಸ್ಪರ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದ ಅವರು, ಘಟನೆ ಬಗ್ಗೆ ಪೂರ್ಣ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com