ಮನಮೋಹನ್ ಸಿಂಗ್ ಗೆ ಸಮನ್ಸ್: ಕಾಂಗ್ರೆಸ್ ನಾಯಕರ ಪ್ರತಿಭಟನೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಯಾಗಿರುವುದರ ಕುರಿತು ಅಕ್ರೋಶ ವ್ಯಕ್ತಪಡಿಸಿರುವ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್
Updated on: 

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಯಾಗಿರುವುದರಕುರಿತು ಅಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನ ನಾಯಕರು ಉತ್ತರ ಪ್ರದೇಶ ರೈಲುಗಳನ್ನುತಡೆಹಿಡಿಯುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ.

ಉದ್ಯಮಿ ಕುಮಾರ ಮಂಗಲಂ, ಪಿ.ಸಿ.ಪರೇಕ್ ಸೇರಿ 6 ಜನರಿಗೆ ಹಾಗೂಹಿಂಡಾಲ್ಕೋಗೆ ಸೇರಿದ 8 ಕಂಪನಿಗಳಿಗೆ ಬುಧವಾರ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಮಾಡಿದ್ದು, ಏಪ್ರಿಲ್ 8 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ. ಈ ಹಿಂದೆಜನವರಿ 20 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮನಮೋಹನ್ ಸಿಂಗ್ ಅವರನ್ನುವಿಚಾರಣೆಗೊಳಪಡಿಸಿತ್ತು.

ಸಿಬಿಐ ನ್ಯಾಯಾಲಯ ಸಮನ್ಸ್ ಜಾರಿ ಮಾಡಿರುವಹಿನ್ನಲೆಯಲ್ಲಿ ಕಾಲ್ನಡಿಗೆಯ ಮೂಲಕ ಕಾಂಗ್ರೆಸ್ ಹಿರಿಯ ಮುಖಂಡರ ಜೊತೆ ಮನಮೋಹನ್ ಸಿಂಗ್ನಿವಾಸಕ್ಕೆ ತೆರಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರಿಗೆನೈತಿಕ ಬೆಂಬಲವನ್ನು ಸೂಚಿಸಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಸಂಸದೆ ರಿತಾ ಬಹುಗುಣ ಜೋಷಿನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉತ್ತರ ಪ್ರದೇಶ ಹೌರಾ- ಅಮೃತಸರ ಎಕ್ಸ್ ಪ್ರೆಸ್ ಹಾಗೂಲಕ್ನೋವಿನ ಚಾರ್ಬಾಗ್ ರೈಲ್ವೆ ನಿಲ್ದಾಣಗಳನ್ನು ತಡೆಹಿಡಿಯುವ ಮೂಲಕ ಪ್ರತಿಭಟನೆಗಳಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com