
ನವದೆಹಲಿ: ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದು 1 ತಿಂಗಳು ಕಳೆದಿದೆ. ಆದರೆ ನೀಡಿದ್ದ ಭರವಸೆಗಳನ್ನು ಪೂರೈಸಲು ವಿಫಲವಾಗಿದೆ ಎಂದು ಬಿಜೆಪಿ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಶನಿವಾರ ಹೇಳಿದ್ದಾರೆ.
ದೆಹಲಿಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಾಗ ಆಮ್ ಆದ್ಮಿ ಪಕ್ಷ ದೆಹಲಿ ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿತ್ತು. ಆರೆಂಜ್ ಕ್ಯಾಟಗರಿಗೆ ಬರುವ ಕಾರ್ಖಾನೆಗಳು ವಾಯು ಮಾಲಿನ್ಯ ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ ಎಂದು ಹೇಳಿತ್ತು. ಆದರೆ ಕಾನೂನು ಬದ್ದವಾಗಿ ಇಂತಹ ನಿರ್ಧಾರಕ್ಕೆ ಅನುಮತಿ ಇಲ್ಲ. ದೆಹಲಿ ಜನರು ಭ್ರಷ್ಟಾಚಾರ ನಿಗ್ರಹ ಸಹಾಯವಾಣಿಗಾಗಿ ಹಲವು ದಿನಗಳಿಂದ ಎದುರು ನೋಡುತ್ತಿದ್ದಾರೆ. ಆಪ್ ಅಧಿಕಾರಕ್ಕೆ ಬಂದು 30 ದಿನಗಳು ಕಳೆದರೂ ನೀಡಿದ್ದ ಭರವಸೆಗಳನ್ನು ಈಡೇರಿಸುವುದರಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.
ಇತ್ತ ಬಿಜೆಪಿ ನಾಯಕರು ಆಪ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರೆ. ಅತ್ತ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಮಕೇನ್ ಅವರು, ಕೇವಲ 30 ದಿನಗಳೊಳಗೆ ಸರ್ಕಾರ ಹೀಗೆ ಇದೆ. ಅಭಿವೃದ್ಧಿ ಕಾರ್ಯಗಳು ಹಾಗೂ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಅನಾರೋಗ್ಯದಿಂದಾಗಿ 10 ದಿನಗಳಿಂದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ರಾಜ್ಯದಲ್ಲಿಲ್ಲ. ಇದೇ ಕಾರಣದಿಂದಲೇ ಕೇಂದ್ರ ಬಜೆಟ್ ನ್ನು ಮುಂದೂಡಲಾಗಿತ್ತು ಎಂದು ಹೇಳುವ ಮೂಲಕ ಆಪ್ ಗೆ ಬೆಂಬಲ ಸೂಚಿಸಿದ್ದಾರೆ.
Advertisement