ಕ್ರೈಸ್ತ ಸನ್ಯಾಸಿನಿ ಮೇಲೆ ಗ್ಯಾಂಗ್ ರೇಪ್: ಐವರ ಬಂಧನ
ರಾಣಾಘಾಟ್ : 75 ವರ್ಷದ ಕ್ರೈಸ್ತ ಸನ್ಯಾಸಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಪಶ್ಚಿಮ ಬಂಗಾಳದ ಪೊಲೀಸರು ಬಂಧಿಸಿದ್ದಾರೆ.
ನಾಡಿಯಾ ಜಿಲ್ಲೆಯ ಗಂಗ್ನಾಪುರದಲ್ಲಿರುವ ಕಾನ್ವೆಂಟ್ ಒಂದಕ್ಕೆ ಮಧ್ಯರಾತ್ರಿ ನುಗ್ಗಿದ ಡಕಾಯಿತರು ಹಣ ದೋಚಲು ಮುಂದಾಗಿದ್ದಾರೆ. ಇದಕ್ಕೆ ಕ್ರೈಸ್ತ ಸನ್ಯಾಸಿ ತಡೆವೊಡ್ಡಿದ್ದಾರೆ.
ಈ ಹಿನ್ನಲೆಯಲ್ಲಿ ಡಕಾಯಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದರು. ಕೃತ್ಯ ನಡೆಸಿದ ದುಷ್ಕರ್ಮಿಗಳು, ತೆರಳುವಾಗ ಅಲ್ಮೆರಾದಲ್ಲಿದ್ದ 12 ಲಕ್ಷ ಹಣವನ್ನು ಹೊತ್ತೊಯ್ದಿದ್ದಾರೆ.
75 ವರ್ಷದ ಕ್ರೈಸ್ತ ಸನ್ಯಾಸಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ವಿಷಯ ತಿಳಿದ ಶಾಲಾ ಮಕ್ಕಳು ಮತ್ತು ಸ್ಥಳೀಯರೂ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 34 ಮತ್ತು ಸೀಲ್ದಾ-ರಾಣಾಘಾಟ್ ರೈಲ್ವೆ ಹಳಿಗಳ ಮೇಲೆ ನಿಂತು ಸಂಚಾರಕ್ಕೆ ಅಡ್ಡಿಪಡಿಸಿದರು.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಬಿಐ ತನಿಖೆಗೆ ಆದೇಶಿದ್ದು, ಪೊಲೀಸರು ಐವರು ಆರೋಪಿಗಳು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ