ಹಾಡಹಗಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಹಾಡಹಗಲೇ (30) ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ...
ತೆಲಂಗಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ತೆಲಂಗಾಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
Updated on

ಹೈದರಾಬಾದ್: ಹಾಡಹಗಲೇ (30) ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಮನ್ನೇಗುಡ ಹಳ್ಳಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಬಳಿ ಕಾಮುಕ ಆಟೋರಿಕ್ಷಾ ಚಾಲಕ ಬಂದಿದ್ದಾನೆ. ಈ ವೇಳೆ ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಆಟೋ ಹತ್ತಿಸಿಕೊಂಡು, ಕೊಂಚ ದೂರ ಹೋಗುತ್ತಿದ್ದಂತೆ ದಾರಿಯಲ್ಲಿದ್ದ ತನ್ನ ಮೂವರು ಸ್ನೇಹಿತರನ್ನು ಆಟೋ ಹತ್ತಿಸಿಕೊಂಡಿದ್ದಾನೆ. ನಂತರ ಮಹಿಳೆಯನ್ನು ಬಲವಂತದಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಕಾಮುಕರು ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ.

ಘಟನೆ ನಂತರ ಮಹಿಳೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಅತ್ಯಾಚಾರಿಗಳನ್ನು ಬಂಧಿನಕ್ಕೊಳಪಡಿಸಿದ್ದು, ಅತ್ಯಾಚಾರಿಗಳ ವಿರುದ್ದ ನಿರ್ಭಯ ಆ್ಯಕ್ಟ್ ನ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com