ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭವನ ಚಲೋ

ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನ ಚಲೋ ಪ್ರತಿಭಟನೆ ನಡೆಸಿ...
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Updated on: 

ನವದೆಹಲಿ: ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನ ಚಲೋ ಪ್ರತಿಭಟನೆ ನಡೆಸಿ, ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಭೂಸ್ವಾಧೀನ ಮಸೂದೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು.

ಸಮಾಜವಾದಿ ಪಕ್ಷ, ಸಿಪಿಎಂ, ತೃಣಮೂಲ ಕಾಂಗ್ರೆಸ್ ಸೇರಿದಂತೆ 14 ಪಕ್ಷಗಳ ನೂರು ಮಂದಿ ಶಾಸಕರು ಈ ರಾಷ್ಟ್ರಪತಿ ಭವನ ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ರಾಷ್ಟ್ರಪತಿಗಳಿಗೆ ನಿವೇದನೆ ಪತ್ರ ನೀಡಿದ ಬಳಿಕ ಮಾತನಾಡಿದ ಅವರು ಸೋನಿಯಾ ಗಾಂಧಿ, ದೇಶದ ರೈತರ ಹಿತದೃಷ್ಟಿಯಿಂದ ಪ್ರತಿಪಕ್ಷಗಳು ಸೇರಿ ಪ್ರತಿಭಟನೆ ನಡೆಸಿದೆವು ಎಂದು ಹೇಳಿದ್ದಾರೆ.

ಎನ್‌ಡಿಎ ಮಿತ್ರ ಪಕ್ಷಗಳು ಮತ್ತು ವಿರೋಧ ಪಕ್ಷಗಳ ವಿರೋಧ  ಲೆಕ್ಕಿಸದೆ ವಿವಾದಿತ ಭೂಸ್ವಾಧೀನ ಮಸೂದೆಗೆ ಲೋಕಸಭೆಯ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರ್ಕಾರವು ಯಶಸ್ವಿಯಾಗಿತ್ತು. ಇದರ ವಿರುದ್ಧ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com