ಕಪ್ಪುಹಣ: ಹೊಸ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಹಣಕಾಸು ಸಚಿವ ಅರಣ್ ಜೇಟ್ಲಿ ಬಜೆಟ್ ನಲ್ಲಿ ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಹಣಕಾಸು ಸಚಿವ ಅರಣ್ ಜೇಟ್ಲಿ ಬಜೆಟ್ ನಲ್ಲಿ ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು.

ಮಂಗಳವಾರ ಸಭೆ ಸೇರಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಅದಕ್ಕೆ ಸಂಬಂಧಿಸಿದ ಮಸೂದೆಗೆ ಒಪ್ಪಿಗೆ ನೀಡಿದೆ.

ಹಾಲಿ ಬಜೆಟ್ ಅಧಿವೇಶನದಲ್ಲಿಯೇ ಅದನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆನ್ನುವುದು ಸರ್ಕಾರದ ಇರಾದೆಯಾಗಿದೆ.

ಮಸೂದೆ ಅನುಷ್ಠಾನಕ್ಕೆ ಬಂದರೆ ತೆರಿಗೆ ಇಲಾಖೆ ಅಧಿಕಾರಿಗಳಿಗೆ ವಿದೇಶಗಳಲ್ಲಿ ಅಕ್ರಮ ಸಂಪ್ತತು, ವಾರಸುದಾರರ ವಿರುದ್ಧ ಕ್ರಮ ಕೈಗೊಳ್ಳಲು ಸುಲಭವಾಗುತ್ತದೆ. ಇದೇ ವೇಳೆ ಮಾ.20ರ ನಂತರವೂ ಅಧಿವೇಶನ ವಿಸ್ತರಿಸಬೇಕೇ ಬೇಡವೇ ಎಂಬ ಬಗ್ಗೆ ಕೇಂದ್ರ ಸಂಪುಟ ಬುಧವಾರ ನಿರ್ಧರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com