ಚರ್ಚ್ ದಾಳಿ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ರಾಜನಾಥ್ ಸಿಂಗ್

ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ಅತ್ತರಿ: ಚರ್ಚ್‌ಗಳ ಮತ್ತು ಅಲ್ಪಸಂಖ್ಯಾತ ಸಂಸ್ಥೆಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಯಾವುದೇ ದೇವಸ್ಥಾನ, ಮಸೀದಿ ಅಥವಾ ಥಾರ್ಮಿಕ ಸಂಸ್ಥೆಗಳ ಮೇಲೆ ದಾಳಿ ಮಾಡುವ ದುಷ್ಕರ್ಮಿಗಳು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಂಗ್ ಭರವಸೆ ನೀಡಿದರು.

ಇತ್ತೀಚಿಗೆ ಹರಿಯಾಣದ ಚರ್ಚ್‌ವೊಂದರ ಮೇಲೆ ನಡೆದ ದಾಳಿ, ಪಶ್ಚಿಮ ಬಂಗಾಳದ ನನ್ ಮೇಲಿನ ಅತ್ಯಾಚಾರ ಆರೋಪ ಪ್ರಕರಣ, ಹಾಗೂ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆ ಚರ್ಚ್ ನಲ್ಲಿ ಸುಮಾರು 200 ಹೆಚ್ಚು ಕ್ರೈಸ್ತರು ಹಾಜರಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಸ್ಥಳಕ್ಕಾಗಮಿಸಿದ ಅನಾಮಿಕ ವ್ಯಕ್ತಿಗಳು ಚರ್ಚ್ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಘಟನೆಗೆ ಜಿಲ್ಲಾಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿತ್ತಲ್ಲದೇ, ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಅಲ್ಲಿನ ಸ್ಥಳೀಯರು ಪಟ್ಟು ಹಿಡಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com