1 ಕೋಟಿ ವಂಚನೆ ಆರೋಪ: ಕಾಂಗ್ರೆಸ್ ನಾಯಕಿ ವಿರುದ್ಧ ಕೇಸ್ ದಾಖಲು

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸುವುದಾಗಿ ಅಭ್ಯರ್ಥಿಯೊಬ್ಬರಿಂದ ಬರೋಬ್ಬರಿ 1.10 ಕೋಟಿ ಹಣ ಪಡೆದು ವಂಚಿಸಿದ್ದಾರೆ...
ರೇಣುಕಾ ಚೌಧರಿ
ರೇಣುಕಾ ಚೌಧರಿ

ಹೈದ್ರಾಬಾದ್: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸುವುದಾಗಿ ಅಭ್ಯರ್ಥಿಯೊಬ್ಬರಿಂದ ಬರೋಬ್ಬರಿ 1.10 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪಕ್ಕೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯೆ ರೇಣುಕಾ ಚೌಧರಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ತೆಲಂಗಾಣದ ಖಮ್ಮಂ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿದ್ದು, 1.10ಕೋಟಿ ರೂ. ವಂಚನೆ ಆರೋಪ ಹಾಗೂ ಜಾತಿ ನಿಂದನೆ ಮೇಲೆ ಪ್ರಕರಣ ದಾಖಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮ್ ಜಿ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸುವುದಾಗಿ ನಂಬಿಸಿ 1.10 ಕೋಟಿ ರೂ. ಹಣ ಪಡೆದಿದ್ದಾರೆ, ಹಣ ವಾಪಸ್ ಹೇಳಿದ್ದಕ್ಕೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಮ್‌ ಜಿ ಎಂಬುವವರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ 1.10 ಕೋಟಿ ಹಣ ಪಡೆದಿದ್ದಾರೆ. ಆದರೆ ರಾಮ್ ಜಿ ಅವರಿಗೆ ಟಿಕೆಟ್ ಕೈ ತಪ್ಪಿದಾಗ ಅವರ ಪತ್ನಿ ಕಲಾವತಿ ಎಂಬುವವರು ರೇಣುಕಾ ಚೌಧರಿ ಬಳಿ ತೆರಳಿ ಹಣ ವಾಪಸ್ ಕೇಳಿದ್ದಾರೆ. ಈ ವೇಳೆ ಅವರು ಜಾನಿ ನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ರಾಮ್ ಜಿ ಅವರು ನಿಧನ ಹೊಂದಿದ ಬಳಿಕ ಕಲಾವತಿ ಅರು ಚೌಧರಿ ಬಳಿ ತೆರಳಿ ಹಣ ಕೇಳಿದಾಗ, ಜಾತಿ ನಿಂದನೆ ಮಾಡುವ ಮೂಲಕ ಹಣ ನೀಡುವುದಿಲ್ಲ ಎಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ಕಲಾವತಿ ಹೈದರಾಬಾದ್ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಆದೇಶ ನೀಡಿತ್ತು.

ನ್ಯಾಯಾಲಯದ ಆದೇಶದ ಅನ್ವಯ ಚೌಧರಿ ವಿರುದ್ಧ ಜಾತಿನಿಂದನೆ ಪ್ರಕರಣದ ಜೊತೆಗೆ ವಂಚನೆ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ.





ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com