ಜಾಟ್ ಸಮುದಾಯ ವಿವಾದ: ಸುಗ್ರೀವಾಜ್ಞೆ ಹೊರಡಿಸಿ ಎಂದ ಸುಬ್ರಮಣಿಯನ್

ಜಾಟ್‌ ಸಮುದಾಯದವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಬೇಕೆಂದರೆ ಸುಗ್ರೀವಾಜ್ಞೆ ಹೊರಡಿಸಿದೆ...
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಜಾಟ್‌ ಸಮುದಾಯದವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಬೇಕೆಂದರೆ ಸುಗ್ರೀವಾಜ್ಞೆ ಹೊರಡಿಸಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ ಹೇಳಿದ್ದಾರೆ.

ಹಿಂದಿನ ಯುಪಿಎ ಸರ್ಕಾರ ಯಾವುದೇ ಸಮೀಕ್ಷೆ ಮತ್ತು ದಾಖಲೆಗಳನ್ನು ಪರಿಶೀಲಿಸದೇ ಜಾಟ್ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಿತ್ತು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಅದನ್ನು ಅನೂರ್ಜಿತಗೊಳಿಸಿದೆ. ಕೇಂದ್ರ ಸರ್ಕಾರ ಈ ಕುರಿತು ಪರಿಶೀಲನೆ ನಡೆಸಿ, ಸುಪ್ರೀಂ ಕೋರ್ಟ್ ನಿರ್ದೇಶನದಲ್ಲಿ ಸುಗ್ರಿವಾಜ್ಞೆ ಹೊರಡಿಸಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಭಾರತದಲ್ಲಿ ವ್ಯಾಪಕ  ಪ್ರಭಾವ ಹೊಂದಿದ ಜಾಟ್‌ ಸಮುದಾಯಕ್ಕೆ ಮೀಸಲಾತಿ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ, ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅದನ್ನು ಒಬಿಸಿ ಪಟ್ಟಿಗೆ ಸೇರಿಸಿತ್ತು. ಯುಪಿಎ ಸರ್ಕಾರದ ಈ ನಿರ್ಧಾರವನ್ನೇ ಅಧಿಕಾರಕ್ಕೆ ಬಂದ ಮೋದಿ ಸರ್ಕಾರವೂ ಜಾಟ್ ಸಮುದಾಯವನ್ನು ಹಿಂದುಳಿದ ಪ್ರವರ್ಗಗಳಲ್ಲಿಯೇ ಮುಂದುವರೆಯುವಂತೆ ಮಾಡಿತ್ತು.

ಜಾಟ್ ಸಮುದಾಯದ ಬೆಳವಣಿಗಳ ಮೇಲೆ ಸುಪ್ರೀಂ ಕಣ್ಗಾವಲಿರಿಸಿದೆ. ಅವರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ದೇಶದಲ್ಲಿ ಪ್ರಬಲವಾಗಿದೆ. ಜಾಟ್ ಸಮುದಾಯವನ್ನು ಹಿಂದುಳಿದ ಪ್ರವರ್ಗಗಳಿಗೆ ಸೇರಿಸಿದರೆ ಇನ್ನಿತರೆ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗುತ್ತದೆ. ಹಾಗಾಗಿ ಜಾಟ್ ಸಮುದಾಯವನ್ನು ಹಿಂದುಳಿತ ಪ್ರವರ್ಗಗಳಿಂದ ಕೈಬಿಡಬೇಕೆಂದು ಕೇಂದ್ರಕ್ಕೆ ಸುಪ್ರೀಂ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com