
ಪಾಟ್ನಾ: ಬಿಹಾರದಲ್ಲಿ ತಮ್ಮ ಸರ್ಕಾರವಿದಿದ್ದರೆ ವಿದ್ಯಾರ್ಥಿಗಳಿಗೆ ನಕಲು ಮಾಡಲು ಪುಸ್ತಕಗಳನ್ನೇ ನೀಡುತ್ತಿದ್ದೆ ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಬಿಹಾರದಲ್ಲಿ ನಡೆದ 10ನೇ ತರಗತಿ ಪರೀಕ್ಷೆಯಲ್ಲಿನ ಸಾಮೂಹಿಕ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು, ಈ ರೀತಿ ಪರೀಕ್ಷೆಯಲ್ಲಿ ನಕಲು ಮಾಡಿ ಉತ್ತೀರ್ಣರಾಗುವುದರಿಂದ ಪ್ರಯೋಜನವಿಲ್ಲ. ಇಂತಹ ಪದವಿಗೆ ದೇಶದ ಯಾವುದೇ ಮೂಲೆಯಲ್ಲಿಯೂ ಬೆಲೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಕೆ ಕೆಲ ಕಿವಿ ಮಾತು ಹೇಳಿರುವ ಅವರು ನಿಮಗೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಸಾಧ್ಯವಿಲ್ಲವೆಂದಾದರೆ ಅನುತೀರ್ಣರಾಗಿ ಪುನಃ ಪರೀಕ್ಷೆಯನ್ನು ತೆಗೆದುಕೊಂಡು ಓದಿ ಉತ್ತೀರ್ಣರಾಗಿ ಎಂದು ಹೇಳಿದ್ದಾರೆ.
ಇನ್ನು ಇದೇ ಪ್ರಕರಣ ಸಂಬಂಧ ರಾಜ್ಯ ಶಿಕ್ಷಣ ಸಚಿವರು ನೀಡಿದ್ದ ಹೇಳಿಕೆ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಲಾಲು ಪ್ರಸಾದ್ ಅವರು, ಸರ್ಕಾರ ಹೇಳುತ್ತದೆ ನಕಲು ತಡೆಯಲು ಸಾಧ್ಯವಿಲ್ಲ ಎಂದು.. ಆದರೆ ನಮ್ಮ ಸರ್ಕಾರವಿದಿದ್ದರೆ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುತ್ತಿದ್ದೆವು. ಆದರೆ ವಿದ್ಯಾರ್ಥಿಗಳಿಗೆ ಇದರಿಂದಲೂ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಅವರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿಲ್ಲ. ಪುಸ್ತಕ ಪಡೆದು ನಕಲು ಮಾಡಿ ಪರೀಕ್ಷೆ ಬರೆಯುವವರಿಗಿಂತಲೂ ಹೆಚ್ಚಾಗಿ ಪುಸ್ತಕ ಪಡೆಯದೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಉತ್ತೀರ್ಣರಾಗುತ್ತಾರೆ ಎಂದು ಲಾಲು ಅಭಿಪ್ರಾಯಪಟ್ಟಿದ್ದಾರೆ.
Advertisement