ಷರೀಫ್‌ಗೆ ಗಣರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ

ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಗಣರಾಜ್ಯೋತ್ಸವ ಶುಭಾಶಯ ಕೋರಿದ್ದಾರೆ.

ಟ್ವಿಟರ್ ಮೂಲಕ ಇಂದು ಪಾಕ್ ಪ್ರಧಾನಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಮೋದಿ, ದ್ವಿಪಕ್ಷಿಯ ಮಾತುಕತೆಯ ಮೂಲಕ ಉಭಯ ದೇಶಗಳಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಮುಕ್ತ ವಾತಾವರಣ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಪಾಕಿಸ್ತಾನ ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್ ನಡೆಸುತ್ತಿದೆ. ತಾಲಿಬಾನ್ ದಾಳಿಯ ಬೆದರಿಕೆ ಹಿನ್ನೆಲೆಯಲ್ಲಿ 2008ರಿಂದ ಇಸ್ಲಾಮಾಬಾದ್‌ನಲ್ಲಿ ಗಣರಾಜ್ಯೋತ್ಸವ ಪರೇಡ್‌ನ್ನು ರದ್ದುಗೊಳಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com