ಡಿಕೆ ರವಿ ಮತ್ತು ಪತ್ನಿ ಕುಸುಮಾ
ದೇಶ
ಡಿ.ಕೆ ರವಿ ಪತ್ನಿ ಕುಸುಮಾಗೆ ಸೋನಿಯಾ ಗಾಂಧಿ ಸಾಂತ್ವನ
ಮೃತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾಗೆ ದೂರವಾಣಿ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವಾಂತನ ಹೇಳಿದ್ದಾರೆ.
ನವದೆಹಲಿ: ಮೃತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾಗೆ ದೂರವಾಣಿ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವಾಂತನ ಹೇಳಿದ್ದಾರೆ.
ಡಿಕೆ ರವಿ ನಿಗೂಢ ಸಾವಿನ ಪ್ರಕರಣ ಸಂಬಂಧ ಹಲವಾರು ಊಹಾಪೋಹಗಳು ಎದಿದ್ದು, ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ವಿಪಕ್ಷಗಳು ಒತ್ತಾಯಿಸಿವೆ. ಈ ನಡುವೆ ರವಿ ಪೋಷಕರು ಸಹ ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದಿದ್ದು, ಈ ಸಂಬಂಧ ಕುಸುಮಾಗೆ ದೂರವಾಣಿ ಕರೆ ಮಾಡಿರುವ ಸೋನಿಯಾ ಗಾಂಧಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿರುವುದಾಗಿ ಹೇಳಿದ್ದಾರೆ.
ಡಿಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲಾಗುವುದು ಅಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಯುತ್ತದೆ. ಸತ್ಯ ಅಸತ್ಯಗಳು ಹೊರ ಬರಲಿದೆ ಎಂಬ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ