ನವಿ ಮುಂಬೈ ಚರ್ಚ್ ದಾಳಿ ಪ್ರಕರಣ: ನಾಲ್ವರ ಬಂಧನ

ಸಿಸಿಟಿವಿ ದೃಶ್ಯ
ಸಿಸಿಟಿವಿ ದೃಶ್ಯ
Updated on: 

ಮುಂಬೈ: ಮೂರು ದಿನಗಳ ನಂತರ ನವಿ ಮುಂಬೈನಲ್ಲಿ ನಡೆದ ಚರ್ಚ್ ದಾಳಿ ಪ್ರಕರಣವನ್ನು ಮುಂಬೈ ಪೊಲೀಸ ಬೇಧಿಸಿದ್ದು, ಪ್ರಕರಣ ಸಂಬಂಧ ಮಂಗಳವಾರ ನಾಲ್ವರನ್ನು ಬಂಧಿಸಿದ್ದಾರೆ.

ಸೇಂಟ್ ಜಾರ್ಜ್ ಕ್ಯಾಥೋಲಿಕ್ ಚರ್ಚ್ ಮೇಲಿನ ದಾಳಿ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ನವಿ ಮುಂಬೈ ಪೊಲೀಸ್ ಆಯುಕ್ತ ಕೆ.ಎಲ್ ಪ್ರಸಾದ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನೀಡಲು ಆಯುಕ್ತರು ನಿರಾಕರಿಸಿದ್ದಾರೆ.

ಪ್ರತಿಪಕ್ಷಗಳ ದಾಳಿಯ ಹಿನ್ನೆಯಲ್ಲಿ ನಿನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಆರೋಪಿಗಳ ಬಂಧನಕ್ಕಾಗಿ ಪೊಲೀಸರಿಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ್ದರು.

ಈ ಪ್ರಕರಣವನ್ನು ಸದನದಲ್ಲಿ ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು, ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದ್ದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಸದನದಿಂದ ಹೊರ ನಡೆದಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com