ಐಟಿ ಕಾಯ್ದೆ ಸೆಕ್ಷನ್ 66(ಎ) ರದ್ದು: ಸುಪ್ರೀಂ ತೀರ್ಪು ಸ್ವಾಗತಿಸಿದ ಮನೀಶ್ ತಿವಾರಿ

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಮಾಜಿ ಕೇಂದ್ರ...
ಮನೀಶ್ ತಿವಾರಿ
ಮನೀಶ್ ತಿವಾರಿ

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಹೇಳಿದ್ದಾರೆ.

ಈ ಕಾಯ್ದೆಯಿಂದ ಕಾನೂನು ದುರ್ಬಳಕೆ ಹೆಚ್ಚಾಗುತ್ತಿತ್ತು. ಕಾನೂನು ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲಿ ಅನುಕೂಲಕರವಾಗಿದೆ.ಸುಪ್ರೀಂ ಕೋರ್ಟ್ ಕಾನೂನನ್ನೇ ರದ್ದುಗೊಳಿಸಿರುವುದನ್ನು ನಾವು ಸ್ವಾಗತಿಸುತ್ತೇವೆ ಎಂದು ಮನೀಶ್ ತಿವಾರ ತಿಳಿಸಿದ್ದಾರೆ.

ನ್ಯಾಯಾಧೀಶರಾದ ಜೆ. ಚೆಲಮೇಶ್ವರ್‌ ಮತ್ತು ರೋಹಿಂಗ್ಟನ್ ನಾರಿಮನ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ)ನ್ನು ರದ್ದು ಪಡಿಸಿದ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com