ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ರದ್ದು: ಸುಪ್ರೀಂ ಮಹತ್ವದ ತೀರ್ಪು

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿ ಮಹತ್ತರ ತೀರ್ಪು ಪ್ರಕಟಿಸಿದೆ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ನ್ಯಾಯಾಧೀಶರಾದ ಜೆ. ಚೆಲಮೇಶ್ವರ್‌ ಮತ್ತು ರೋಹಿಂಗ್ಟನ್ ನಾರಿಮನ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ)ನ್ನು ರದ್ದು ಪಡಿಸಿದ ಆದೇಶ ಹೊರಡಿಸಿದೆ.

ಸೆಕ್ಷನ್ 66 ಎ ಗೆ ಸಾಂವಿಧಾನಿಕ ಮಾನ್ಯತೆಯೇ ಇಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಐಟಿ ಕಾಯ್ದೆ ಸೆಕ್ಷನ್ (66) ಎ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾದದ್ದು, ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿರುವಂತದ್ದು ಎಂದು ಆರೋಪಿಸಿ ಸಾರ್ವಜನಿಕ ಹೀತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಶಿವಸೇನಾ ನಾಯಕ ಬಾಳಾ ಠಾಕ್ರೆ ಅವರ ನಿಧನದ ನಂತರ ಮಹಾರಾಷ್ಟ್ರ ಬಂದ್ ಸಮಯದಲ್ಲಿ ಫೇಸ್ ಬುಕನ್ ಲ್ಲಿ ಕಮೆಂಟ್ ದಾಖಲಿಸಿದ್ದ ಇಬ್ಬರು ಯುವತಿಯರ ವಿರುದ್ಧ ಮಾಹಿತಿ ಮತ್ತು ತಂತ್ರಜ್ಞಾನ ಕಾನೂನಿನಡಿಯಲ್ಲಿ ಬಂಧಿಸಿಲಾಗಿತ್ತು. ಪ್ರಸ್ತುತ ಈ ಇಬ್ಬರು ವಿದ್ಯಾರ್ಥಿನಿಯರು ಜಾಮೀನು ಮೇಲೆ ಹೊರಬಂದಿದ್ದಾರೆ. ಪೊಲೀಸರ ಈ ಕ್ರಮವನ್ನು ಪ್ರಶ್ನಿಸಿ ದೆಹಲಿ ಮೂಲದ ಕಾನೂನು ವಿದ್ಯಾರ್ಥಿನಿ ಶ್ರೇಯಾ ಸಿಂಗಾಲ್ ಅವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಇವರಿಗೆ ವಿವಿಧ ಸಂಘಟನೆಗಳು ಸಾಥ್ ನೀಡಿದ್ದವು.

ಸಾಮಾಜಿಕ ಜಾಲತಾಣಗಳಲ್ಲಿ ಕಿರಿಕಿರಿ ಮತ್ತು ಆಕ್ಷೇಪಾರ್ಹ ಸಂದೇಶಗಳನ್ನು ಬಿತ್ತರಿಸುವವರನ್ನು ಬಂಧಿಸಲು ಆಸ್ಪದ ನೀಡುವ ಮಾಹಿತಿ ತಂತ್ರಜ್ಞಾನ ಕಾಯ್ದೆ(ಐಟಿ ಕಾಯ್ದೆ) ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರ ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋಟ್ರ್ ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.

ಈ ಕಾಯ್ದೆಯಡಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಬಿತ್ತರಿಸುವವರನ್ನು ಬಂಧಿಸುವ ಅವಕಾಶವೂ ಇದೆ.ಹೀಗಾಗಿ ಈ ಕಾಯ್ದೆಯು ಅಂತರ್ಜಾಲ ಬಳಕೆದಾರರ ಸ್ವಾತಂತ್ರ್ಯವನ್ನು ಹತ್ತಿಕ್ಕಲಿದೆ ಎಂದು ಆರೋಪಿಸಿ ಸಾಕಷ್ಟು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳೂ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದವು.

ಮುಂಬೈ ಮೇಲೆ ನಡೆದ 26/11ರ ಭಯೋತ್ಪಾದಕ ದಾಳಿಯ ನಂತರ ಐಟಿ ಕಾಯ್ದೆಯನ್ನು ಆತುರವಾಗಿ ತಿದ್ದುಪಡಿ ಮಾಡಲಾಗಿತ್ತು. 2008ರ ಡಿಸೆಂಬರ್ 22ರಂದು ಇದನ್ನು ಲೋಕಸಭೆ ಅಂಗೀಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com