ಕಾರ್ಯಕರ್ತರೊಂದಿಗೆ ಸಂಬಂಧ ದೂರ: ಬಿಜೆಪಿಗೆ ಆರ್‍ಎಸ್‍ಎಸ್ ಎಚ್ಚರಿಕೆ

ಬಿಜೆಪಿಯು ತನ್ನ ಕಾರ್ಯಕರ್ತರೊಂದಿಗೆ ಸಂಪರ್ಕವನ್ನು ಕಡಿದುಕೊಳ್ಳುತ್ತಿರುವುದರ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ...
ಅಮಿತ್ ಶಾ (ಸಂಗ್ರಹ ಚಿತ್ರ)
ಅಮಿತ್ ಶಾ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಬಿಜೆಪಿಯು ತನ್ನ ಕಾರ್ಯಕರ್ತರೊಂದಿಗೆ ಸಂಪರ್ಕವನ್ನು ಕಡಿದುಕೊಳ್ಳುತ್ತಿರುವುದರ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‍ಎಸ್‍ಎಸ್) ಕಳವಳ ವ್ಯಕ್ತಪಡಿಸಿದೆ.

ಸೋಮವಾರ ಸಂಜೆ ಆರ್‍ಎಸ್‍ಎಸ್ ನಾಯಕರನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭೇಟಿ ಮಾಡಿದ್ದಾಗ ಈ ವಿಷಯವನ್ನು ಅವರ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ತಿಂಗಳಲ್ಲಿ ಎರಡು ಬಾರಿ ಅಮಿತ್ ಶಾ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ನಡುವೆ ಅಂತರ ಬೆಳೆಯುತ್ತ ಹೋದರೆ ಇದೇ ವರ್ಷ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ ಪಕ್ಷಕ್ಕೆ ಹಾನಿಯಾಗಲಿದೆ. ಇದನ್ನು ನಿವಾರಿಸಿಕೊಳ್ಳಬೇಕೆಂದು ಈ ಸಭೆಯಲ್ಲಿ ಆರ್‍ಎಸ್‍ಎಸ್ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

ಅಮಿತ್ ಶಾ ಅವರು ಪಕ್ಷದ ಕೇಂದ್ರ ಕಚೇರಿಯಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಸೋಮವಾರ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಯೋಜನೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಬಿಜೆಪಿಯ ಚುನಾವಣೆ ಪ್ರಣಾಳಿಕೆಯ ಒಂದು ಭಾಗ ಇದಾಗಿತ್ತು. ಆದರೆ ಕಳೆದ ವರ್ಷ ಅ„ಕಾರಕ್ಕೆ ಬಂದಬಳಿಕ ಇದು ಆದ್ಯ ಕಾರ್ಯಕ್ರಮವಾಗಿ ಕಂಡುಬಂದಿಲ್ಲ ಎಂದು ಆರ್‍ಎಸ್‍ಎಸ್ ಕಳವಳ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com